ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳಲು ಕರೆ
ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳಲು ಕರೆ
ಕೋಲಾರ ತಾಲ್ಲೂಕು ಹರಟಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸೇವಾದಳ ಆಶ್ರಯದಲ್ಲಿ ನಡೆದ ನಾಯಕತ್ವ ತರಬೇತಿ ಶಿಬಿರದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್.ನಾಗರಾಜ್ ವಿದ್ಯಾರ್ಥಿಗಳಿಗೆ ಧ್ವಜ ನೀಡಿದರು.


ಕೋಲಾರ, ೧೪ ಜುಲೈ (ಹಿ.ಸ):

ಆ್ಯಂಕರ್ : ವಿದ್ಯಾರ್ಥಿ ಯುವಜನತೆ ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ಈ ಮೂಲಕ ರಾಷ್ಟ್ರೀಯ ಸದ್ಭಾವನೆ ಸೇವಾ ನೈಪುಣ್ಯ ಮತ್ತು ದೇಶಭಕ್ತಿಯನ್ನು ಬೆಳಸುವುದು ಭಾರತ ಸೇವಾದಳದ ಉದ್ದೇಶ ಎಂದು ಹರಟಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್. ನಾಗರಾಜ್ ತಿಳಿಸಿದರು.

ಕೋಲಾರ ತಾಲೂಕು ಹರಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿಂದು ಏರ್ಪಡಿಸಿದ್ದ ಮಕ್ಕಳ ನಾಯಕತ್ವ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಮಾಜದ ಪ್ರತಿಯೊಬ್ಬ ನಾಗರಿಕನು ತನ್ನ ಹಕ್ಕುಗಳು ಬಗ್ಗೆ ಮಾತ್ರವಲ್ಲ ಕರ್ತವ್ಯಗಳ ಬಗ್ಗೆಯೂ ಅರಿವು ಉಳ್ಳವರಾಗಿರಬೇಕು ತ್ಯಾಗ ಮತ್ತು ಸೇವೆಯ ಭಾವನೆಗಳನ್ನು ಹರಡುವಲ್ಲಿ ಸೇವಾದಳ ಮಹತ್ವದ ಪಾತ್ರ ವಹಿಸುತ್ತದೆ ಶಿಸ್ತು ಸಹಕಾರ ಮತ್ತು ನೈತಿಕ ಮೌಲ್ಯಗಳು ಉತ್ತಮ ನಾಗರಿಕನಾಗಿ ತಯಾರು ಮಾಡಲು ಸಾಧ್ಯ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಭಾರತ ಸೇವಾದಳ ಉಪಾಧ್ಯಕ್ಷ ಜಿ. ಶ್ರೀನಿವಾಸ್ ಮಾತನಾಡಿ, ಶಿಕ್ಷಕರು ಮತ್ತು ಪೋಷಕರು ಸೇವಾ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಮೂಲಕ ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಕೊಡುಗೆ ನೀಡಬಹುದು ಸೇವಾದಳ ತರಬೇತಿ ಮತ್ತು ಚಟುವಟಿಕೆಗಳು ವಿದ್ಯಾರ್ಥಿಗಳನ್ನು ಸಮರ್ಥ ಮತ್ತು ಜವಾಬ್ದಾರಿಯುತ ಬಿಟ್ಟುವನ್ನಾಗಿ ಬೆಳೆಸುವುದರ ಜೊತೆಗೆ ರಾಷ್ಟ್ರೀಯ ಬ್ರಾತೃತ್ವವನ್ನು ನಿರ್ಮಿಸುತ್ತದೆ ಎಂದರು.

ಜಿಲ್ಲಾ ಭಾರತ ಸೇವಾದಳ ಸಂಘಟಕ ಎಂ.ಬಿ. ಧಾನೇಶ್ ಮಾತನಾಡಿ ವಿದ್ಯಾರ್ಥಿಗಳ ಸರ್ವತೋಮುಖ ಪ್ರಗತಿಗೆ ಮಾನಸಿಕ ಮತ್ತು ದೈಹಿಕ ಚಟುವಟಿಕೆಗಳು ಪೂರಕವಾಗಿದೆ ಇದರ ಜೊತೆಗೆ ರಾಷ್ಟ್ರೀಯ ಸಹೋದರತ್ವ ರಾಷ್ಟ್ರ ಪ್ರೇಮ ಮೂಡಿಸುವ ಕಾರ್ಯದಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವ ಅಗತ್ಯವಿದೆ ಎಂದರು.

ಸಮಾರಂಭದಲ್ಲಿ ರಾಷ್ಟ್ರಧ್ವಜ, ರಾಷ್ಟ್ರಗೀತೆ, ರಾಷ್ಟ್ರ ಲಾಂಛನಗಳ ಬಗ್ಗೆ ಅರಿವು ಮೂಡಿಸಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಉಂಟು ಮಾಡಿದ ಈ ಸಂದರ್ಭದಲ್ಲಿ ಸಹ ಶಿಕ್ಷಕಿ ಕೆ.ಮಮತಾ ಸ್ವಾಗತಿಸಿ, ಸಹ ಶಿಕ್ಷಕಿ ಎಸ್.ವಿ.ರೋಜ ವಂದಿಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande