ಕಲಬುರಗಿಯಲ್ಲಿ ಪರಾರಿಯಾಗಿದ್ದ ಆರೋಪಿಗೆ ಪೊಲೀಸ್ ಗುಂಡೇಟು
ಕಲಬುರಗಿ, 15 ಜುಲೈ (ಹಿ.ಸ.): ಆ್ಯಂಕರ್: ಕಲಬುರಗಿ ಜಿಲ್ಲೆಯ ಕಪನೂರು ಕೈಗಾರಿಕಾ ಪ್ರದೇಶದಲ್ಲಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಲು ತೆರಳಿದ ವೇಳೆ ನಡೆದ ಘರ್ಷಣೆಯಲ್ಲಿ ಪೊಲೀಸರು ಗುಂಡು ಹಾರಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಅವರ ಮಾಹಿತಿ ಪ್ರಕಾರ, ಕೇಂದ್ರ ಕಾರಾಗೃಹದಿಂದ ಪರಾರಿಯಾಗಿ
ಕಲಬುರಗಿ ಕೇಂದ್ರ ಕಾರಾಗೃಹ ಸಂಗ್ರಹ ಚಿತ್ರ


ಕಲಬುರಗಿ, 15 ಜುಲೈ (ಹಿ.ಸ.):

ಆ್ಯಂಕರ್:

ಕಲಬುರಗಿ ಜಿಲ್ಲೆಯ ಕಪನೂರು ಕೈಗಾರಿಕಾ ಪ್ರದೇಶದಲ್ಲಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಲು ತೆರಳಿದ ವೇಳೆ ನಡೆದ ಘರ್ಷಣೆಯಲ್ಲಿ ಪೊಲೀಸರು ಗುಂಡು ಹಾರಿಸಿದ್ದಾರೆ.

ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಅವರ ಮಾಹಿತಿ ಪ್ರಕಾರ, ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ ಮೂವರು ಆರೋಪಿಗಳ ಪತ್ತೆಗಾಗಿ ಕಲಬುರಗಿ ನಗರ, ಜಿಲ್ಲಾ ಹಾಗೂ ಬೀದರ್ ಪೊಲೀಸರ ವಿಶೇಷ ತಂಡ ರಚಿಸಲಾಗಿತ್ತು. ಖಚಿತ ಮಾಹಿತಿಯ ಮೇರೆಗೆ ಸಂತೋಷ್ ಎಂಬ ಆರೋಪಿಯನ್ನು ಬಂಧಿಸಲು ತೆರಳಿದಾಗ, ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಆತ್ಮರಕ್ಷಣೆಗಾಗಿ ಪೊಲೀಸರು ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ, ಬಳಿಕ ಆರೋಪಿಯ ಬಲ ಕಾಲಿಗೆ ಗುಂಡು ಹೊಡೆದಿದ್ದಾರೆ.

ಘಟನೆಯಲ್ಲಿ ಇಬ್ಬರು ಪೊಲೀಸ್ ಪೇದೆಗಳು ಗಾಯಗೊಂಡಿದ್ದು, ಗಾಯಗೊಂಡ ಆರೋಪಿಯೊಂದಿಗೆ ಅವರನ್ನು ಕಲಬುರಗಿ ಜಿಮ್ಸ್ ಆಸ್ಪತ್ರೆಯ ಟ್ರಾಮಾ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪರಾರಿಯಾಗಿರುವ ಉಳಿದ ಇಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande