
ರಾಯಚೂರು , 15 ಜುಲೈ (ಹಿ.ಸ.):
ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ರಾಯಚೂರು ವತಿಯಿಂದ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಷಿ ವಿದ್ಯಾರ್ಥಿಗಳಿಂದ ಕಾನೂನು ಪದವಿ ಪಡೆದಿರುವ ಅಭ್ಯರ್ಥಿಗಳಿಗೆ 4 ವರ್ಷಗಳ ಕಾನೂನು ತರಬೇತಿ ಭತ್ಯೆ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಷರತ್ತುಗಳು: ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ) ಸಮುದಾಯಕ್ಕೆ ಸೇರಿದವರಾಗಿರಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ 3.50 ಲಕ ರೂ.್ಷಕ್ಕೆ ಮೀರಿರಬಾರದು.
ಅಭ್ಯರ್ಥಿಯು ಬಾರ್ ಕೌನ್ಸಿಲಿಂಗ್ ನಲ್ಲಿ ಹೆಸರನ್ನು ನೊಂದಾಯಿಸಿರಬೇಕು. ಅರ್ಜಿ ಸಲ್ಲಿಸಲು ನಿಗಧಿ ಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 30 ವರ್ಷದೊಳಗಿರಬೇಕು ಮತ್ತು ಅರ್ಜಿ ಸಲ್ಲಿಸಲುವ ಕೊನೆಯ ದಿನಾಂಕಕ್ಕೆ ಕಾನೂನು ಪದವಿ ಪೂರ್ಣಗೊಳಿಸಿ 2 ವರ್ಷವಾಗಿರಬೇಕು. ಅಭ್ಯರ್ಥಿಗಳು ಸಲ್ಲಿಸುವ ಮಾಹೆಯಾನ ದಿನಚರಿಯನ್ನು ಪರಿಶೀಲಿಸಿ ತರಬೇತಿ ಭತ್ಯೆಯನ್ನು ಮಂಜೂರು ಮಾಡಲಾಗುವುದು.
ಅಭ್ಯರ್ಥಿಯು ತರಬೇತಿಯನ್ನು ಮಧ್ಯದಲ್ಲಿ ಬಿಡುವಂತಿಲ್ಲ ಈ ಬಗ್ಗೆ ಒಂದು ಮಚ್ಚಳಿಗೆ ಪತ್ರ ನೀಡಬೇಕು ಒಂದು ವೇಳೆ ಸರ್ಕಾರಿ ಉದ್ಯೋಗ ದೊರಕಿದಲ್ಲಿ ಅಥವಾ ನ್ಯಾಯಾಧೀಶರಾಗಿ ನೇಮಕಾತಿ ಹೊಂದಿದಲ್ಲಿ ಜಿಲ್ಲಾ ಸಮಿತಿಯ ಗಮನಕ್ಕೆ ತಂದು ತರಬೇತಿ ಬಿಡಬಹುದು ಹಾಗೂ ವಿಶೇಷ ಸಂದರ್ಭದಲ್ಲಿ ಬಿಡಬೇಕಾದಲ್ಲಿ ಸರ್ಕಾರದ ಅನುಮತಿ ಪಡೆಯಬೇಕು.
ಜಿಲ್ಲೆಯಲ್ಲಿ ಮೂರು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಇದರಲ್ಲಿ ಎರಡು ಅಭ್ಯರ್ಥಿ ಮುಸ್ಲಿಂ ಹಾಗೂ ಇನ್ನೊಬ್ಬ ಅಭ್ಯರ್ಥಿಯನ್ನು ಇತರೆ ಅಲ್ಪಸಂಖ್ಯಾತರ ಸಮುದಾಯದಿಂದ ಆಯ್ಕೆ ಮಾಡಲಾಗುವುದು.
ಅರ್ಜಿಗಳು ಸಲ್ಲಿಸಲು ಬೇಕಾಗುವ ದಾಖಲಾತಿಗಳು: ನಿಗಧಿತ ನಮೂನೆಯಲ್ಲಿ ಅರ್ಜಿ. ತಹಶೀಲ್ದಾರರಿಂದ ಪಡೆದ ಆದಾಯ ಮತ್ತು ಜಾತಿ ಪ್ರಮಾಣ ಪತ್ರ (ಧೃಡೀಕೃತ ಪ್ರತಿ). ತಹಶೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ. ಸ್ವಯಂ ದೃಡೀಕೃತ 2 ಭಾವಚಿತ್ರ. ಕಾನೂನು ಪದವಿಯ ಅಂಕ ಪಟ್ಟಿ (ದೃಡೀಕೃತ ಪ್ರತಿ). ಬಾರ್ ಕೌನ್ಸಿಲಿಂಗ್ನಲ್ಲಿ ಹೆಸರನ್ನು ನೊಂದಾಯಿಸಿದ ಪ್ರತಿಯೊಂದಿಗೆ ಜುಲೈ 30ರ ಸಂಜೆ 5ಗಂಟೆಯೊಳಗಾಗಿ ಅರ್ಜಿಯನ್ನು ಆಯಾ ತಾಲೂಕು ಅಲ್ಪಸಂಖ್ಯಾತರ ಕಚೇರಿಗಳಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ರಾಯಚೂರು: 9731028420, ಮಾನವಿ ಮತ್ತು ಸಿರವಾರ: 886733478, ದೇವದುರ್ಗ ಮತ್ತು ಅರಕೇರಾ: 9148233616, ಲಿಂಗಸೂಗೂರು, ಮಸ್ಕಿ ಮತ್ತು ಸಿಂಧನೂರು: 8217621732, 9740871306ಗೆ ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್