
ರಾಯಚೂರು , 15 ಜುಲೈ (ಹಿ.ಸ.):
ಆ್ಯಂಕರ್ : ರಾಯಚೂರು ಜಿಲ್ಲೆಯಲ್ಲಿ ಖಾಲಿ ಇರುವ 05 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಿಗೆ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಯ ಹೆಸರು: ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರರ ಖಾಲಿ ಇರುವ 05 ಹುದ್ದೆಗಳಿಗೆ ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ (ಪಿಯುಸಿ) ಉತ್ತೀರ್ಣವಾಗಿರತಕ್ಕದ್ದು, ಮತ್ತು ಸರ್ಟಿಫಿಕೇಶನ್ ಕೋರ್ಸ್ ಇನ್ ಲೈಬ್ರರಿಸೈನ್ಸ್ ನಲ್ಲಿ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ನಲ್ಲಿ ಉತ್ತೀರ್ಣವಾಗಿರಬೇಕು. ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು/ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ರಾಯಚೂರು ಜಿಲ್ಲಾ ಪಂಚಾಯತಿ ವೆಬ್ಸೈಟ್ ವಿಳಾಸ: https://zpraichur.karnataka.gov.in/en ನಲ್ಲಿ ನೀಡಲಾದ ಸೂಚನೆಗಳನ್ನು ಹಾಗೂ ನೇಮಕಾತಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು, ಕೂಲಂಕುಷವಾಗಿ ಓದಿ ಅರ್ಥೈಸಿಕೊಂಡು ಅದರಂತೆ ಸೂಕ್ತ ಸಿದ್ಧತೆಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳು ಹಾಗೂ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಆಯ್ಕೆ ಸಮಿತಿ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್