ಬಳ್ಳಾರಿ: ಬಸ್ ಪಾಸ್ ಹಣ ಮರುಪಾವತಿಗೆ ಅರ್ಜಿ ಆಹ್ವಾನ
ಬಳ್ಳಾರಿ, 15 ಜುಲೈ (ಹಿ.ಸ.): ಆ್ಯಂಕರ್ : ಪ್ರಸ್ತಕ ಸಾಲಿನಲ್ಲಿ ಈಗಾಗಲೇ ಹಣ ಪಾವತಿಸಿ ಬಸ್ ಪಾಸ್ ಪಡೆದುಕೊಂಡಿರುವ ವಿದ್ಯಾರ್ಥಿಗಳಿಗೆ ಆ ಹಣವನ್ನು ಮರುಪಾವತಿ ಮಾಡಲು ಸರ್ಕಾರ ಕ್ರಮ ಕೈಗೊಂಡಿದ್ದು, ಇದಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ
ಬಳ್ಳಾರಿ: ಬಸ್ ಪಾಸ್ ಹಣ ಮರುಪಾವತಿಗೆ ಅರ್ಜಿ ಆಹ್ವಾನ


ಬಳ್ಳಾರಿ, 15 ಜುಲೈ (ಹಿ.ಸ.):

ಆ್ಯಂಕರ್ : ಪ್ರಸ್ತಕ ಸಾಲಿನಲ್ಲಿ ಈಗಾಗಲೇ ಹಣ ಪಾವತಿಸಿ ಬಸ್ ಪಾಸ್ ಪಡೆದುಕೊಂಡಿರುವ ವಿದ್ಯಾರ್ಥಿಗಳಿಗೆ ಆ ಹಣವನ್ನು ಮರುಪಾವತಿ ಮಾಡಲು ಸರ್ಕಾರ ಕ್ರಮ ಕೈಗೊಂಡಿದ್ದು, ಇದಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್ ಅವರು ತಿಳಿಸಿದ್ದಾರೆ.

ಕ.ಕ.ರ.ಸಾ (ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ) ನಿಗಮವು ಸಾಮಾಜಿಕ ಹೊಣೆಗಾರಿಕೆಯಡಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅವರ ವಾಸಸ್ಥಳ ಹಾಗೂ ವಿದ್ಯಾಸಂಸ್ಥೆಯ ನಡುವೆ ಸಂಚರಿಸಲು ಉಚಿತ ಬಸ್ ಪಾಸ್ಗಳನ್ನು ವಿತರಿಸುತ್ತಿದೆ.

ಕರ್ನಾಟಕ ಸರ್ಕಾರವು ಸಾರಿಗೆ ನಿಗಮಗಳ ಬಸ್ಗಳಲ್ಲಿ ಪ್ರಯಾಣಿಸುವ ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ಅನುಮೋದನೆ ನೀಡಿ ಆದೇಶಿಸಿದೆ.

ಈಗಾಗಲೇ 2026-27ನೇ ಸಾಲಿನಲ್ಲಿ ಹಣ ನೀಡಿ ಪಾಸ್ ಪಡೆದಿರುವ ವಿದ್ಯಾರ್ಥಿಗಳು ತಮ್ಮ ಹಣವನ್ನು ಮರಳಿ ಪಡೆಯಲು ಅಧಿಕೃತ ಪೋರ್ಟಲ್ ಸರ್ಕಾರದ ಸೇವಾಸಿಂಧು ಪೋರ್ಟಲ್ ಲಿಂಕ್ https://sevasindhuservices.karnataka.gov.in/buspassservices/ ಮೂಲಕ ಅರ್ಜಿ ಸಲ್ಲಿಸಬೇಕು.

ವೆಬ್ಸೈಟ್ನಲ್ಲಿ ಮೊಬೈಲ್ ಸಂಖ್ಯೆಯನ್ನು ನಮೂದಿಸಿ, ಆಧಾರ್ ಆಧಾರಿತ ಇ-ಕೆವೈಸಿ ಪೂರ್ಣಗೊಳಿಸಬೇಕು. ವಿದ್ಯಾರ್ಥಿಗಳು ತಮ್ಮ ಅಥವಾ ತಮ್ಮ ಪೋಷಕರ ಬ್ಯಾಂಕ್ ಖಾತೆಯ ವಿವರಗಳನ್ನು ನಿಖರವಾಗಿ ನಮೂದಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸಿದ 7 ದಿನಗಳ ಒಳಗಾಗಿ ಬಸ್ ಪಾಸ್ನ ಪೂರ್ಣ ಮೊತ್ತವು ವಿದ್ಯಾರ್ಥಿ ಅಥವಾ ಪೋಷಕರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande