ಬಳ್ಳಾರಿ : ಜು.18 ರಂದು ಮಿನಿ ಉದ್ಯೋಗ ಮೇಳ
ಬಳ್ಳಾರಿ, 15 ಜುಲೈ (ಹಿ.ಸ.): ಆ್ಯಂಕರ್ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಹಳೇ ತಾಲ್ಲೂಕು ಕಚೇರಿ ಹಿಂಭಾಗದಲ್ಲಿರುವ ಕಚೇರಿ ಆವರಣದಲ್ಲಿ ಜುಲೈ 18 ರಂದು ಬೆಳಿಗ್ಗೆ 10 ರಿಂದ ಗಂಟೆಯಿಂದ ಸಂಜೆ 04 ಗಂಟೆಯವರೆಗೆ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದ
ಬಳ್ಳಾರಿ : ಜು.18 ರಂದು ಮಿನಿ ಉದ್ಯೋಗ ಮೇಳ


ಬಳ್ಳಾರಿ, 15 ಜುಲೈ (ಹಿ.ಸ.):

ಆ್ಯಂಕರ್ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಹಳೇ ತಾಲ್ಲೂಕು ಕಚೇರಿ ಹಿಂಭಾಗದಲ್ಲಿರುವ ಕಚೇರಿ ಆವರಣದಲ್ಲಿ ಜುಲೈ 18 ರಂದು ಬೆಳಿಗ್ಗೆ 10 ರಿಂದ ಗಂಟೆಯಿಂದ ಸಂಜೆ 04 ಗಂಟೆಯವರೆಗೆ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

ವಿವಿಧ ಖಾಸಗಿ ಕಂಪನಿಗಳಲ್ಲಿ 100 ಕ್ಕೂ ಹೆಚ್ಚು ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಭರ್ತಿ ಮಾಡಿಕೊಳ್ಳಲು ಈ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ಭಾಗವಹಿಸುವ ಕಂಪನಿ ಮತ್ತು ಹುದ್ದೆ:

ಟಿಸಿ ಮ್ಯಾನ್ಟೆಕ್ ಸೋಲ್ಯುಷನ್: ಕ್ಯಾಶ್ ಮ್ಯಾನೇಜ್ಮೆಂಟ್ ಎಕ್ಸಿಕ್ಯೂಟಿವ್

ಹ್ಯಾಲೀಸ್ ಬ್ಲೂ: ಆಪರೇಟರ್ ಟ್ರೈನಿ ಮತ್ತು ಹೆಲ್ಪರ್

ಭಾರತ್ ಫೈನಾನ್ಶಿಯಲ್: ಸಿ.ಆರ್.ಒ

ಕೋಟಕ್ ಬ್ಯಾಂಕ್: ಆರ್.ಒ

ಈ ಸಂದರ್ಶನದಲ್ಲಿ ಭಾಗವಹಿಸಲು ಪುರುಷರು ಹಾಗೂ ಮಹಿಳೆಯರಿಬ್ಬರಿಗೂ ಮುಕ್ತ ಅವಕಾಶವಿದೆ. ಉದ್ಯೋಗ ಮೇಳಕ್ಕೆ ಯಾವುದೇ ರೀತಿಯ ಪ್ರವೇಶ ಶುಲ್ಕ ಇರುವುದಿಲ್ಲ. ಆಸಕ್ತ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ ಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿ ಹಾಗೂ ಸಂಪರ್ಕಕ್ಕಾಗಿ ಮೊ.7619207762, 6360408094, 7676427793, 8277000619 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ನಿರುದ್ಯೋಗಿ ಯುವಕ-ಯುವತಿಯರು ಈ ಸುವರ್ಣಾವಕಾಶದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande