ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಕಾಂಗ್ರೆಸ್ ಸರ್ಕಾರಕ್ಕೆ ಜನ ತಕ್ಕ ಉತ್ತರ ನೀಡಲಿದ್ದಾರೆ: ಆರ್. ಅಶೋಕ್
ಬೆಂಗಳೂರು, 15 ಜುಲೈ (ಹಿ.ಸ.): ಆ್ಯಂಕರ್: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ 11 ಮಂದಿಯ ಸಾವಿಗೆ ಕಾಂಗ್ರೆಸ್ ಸರ್ಕಾರವೇ ಹೊಣೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, ಐ
ಅಶೋಕ


ಬೆಂಗಳೂರು, 15 ಜುಲೈ (ಹಿ.ಸ.):

ಆ್ಯಂಕರ್:

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ 11 ಮಂದಿಯ ಸಾವಿಗೆ ಕಾಂಗ್ರೆಸ್ ಸರ್ಕಾರವೇ ಹೊಣೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, ಐಪಿಎಲ್ ವಿಜಯೋತ್ಸವಕ್ಕೆ ಒಂದೇ ದಿನ ಎರಡು ಕಡೆ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಂದು ಟೀಕಿಸಿದ್ದಾರೆ. ಪೊಲೀಸ್ ಎಚ್ಚರಿಕೆಗಳಿದ್ದರೂ ಕಾರ್ಯಕ್ರಮ ನಡೆಸಲು ಒತ್ತಾಯಿಸಲಾಗಿತ್ತು ಎಂದು ಆರೋಪಿಸಿದ್ದಾರೆ.

ಪ್ರಕರಣದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಹಿರಿಯ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳನ್ನು ದೋಷಮುಕ್ತಗೊಳಿಸಿರುವುದನ್ನು ಪ್ರಶ್ನಿಸಿರುವ ಅವರು, ಮೃತಪಟ್ಟ 11 ಅಮಾಯಕರ ಸಾವಿಗೆ ಹೊಣೆ ಯಾರು ಎಂಬುದಕ್ಕೆ ಸರ್ಕಾರ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.

ನೊಂದ ಕುಟುಂಬಗಳಿಗೆ ನ್ಯಾಯ ದೊರಕಿಸುವ ಬದಲು ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿರುವ ಅಶೋಕ್, ಜನರು ಈ ಘಟನೆ ಮರೆತಿಲ್ಲ; ಸೂಕ್ತ ಸಮಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande