ಆರ್. ಎಸ್. ಎಸ್. ಕಚೇರಿಗೆ ಭೇಟಿ ಪ್ರಕರಣ: ನೋಟಿಸ್ ಗೆ ಉತ್ತರಿಸಿದ ನಾಗರಾಜ ಹದ್ಲಿ; ಪರಿಶೀಲಿಸಿ ವರಿಷ್ಠರಿಗೆ ವರದಿ ಸಲ್ಲಿಕೆ: ನಂಜಯ್ಯನಮಠ
ಬಾಗಲಕೋಟೆ, 15 ಜುಲೈ (ಹಿ.ಸ.): ಆ್ಯಂಕರ್ : ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ನಾಗರಾಜ ಹದ್ಲಿ ಅವರು ಆರ್ ಎಸ್ ಎಸ ಕಚೇರಿಗೆ ಭೇಟಿ ನೀಡಿರುವ ಕುರಿತು ಪಕ್ಷದಿಂದ ನೀಡಲಾಗಿದ್ದ ನೋಟಿಸ್ಗೆ ಅವರು ಲಿಖಿತ ಉತ್ತರ ಸಲ್ಲಿಸಿದ್ದಾರೆ ಎಂದು ಕೆಪಿಸಿಸಿ ಜಿಲ್ಲಾ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ
ಮೀಟ್


ಬಾಗಲಕೋಟೆ, 15 ಜುಲೈ (ಹಿ.ಸ.):

ಆ್ಯಂಕರ್ : ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ನಾಗರಾಜ ಹದ್ಲಿ ಅವರು ಆರ್ ಎಸ್ ಎಸ ಕಚೇರಿಗೆ ಭೇಟಿ ನೀಡಿರುವ ಕುರಿತು ಪಕ್ಷದಿಂದ ನೀಡಲಾಗಿದ್ದ ನೋಟಿಸ್ಗೆ ಅವರು ಲಿಖಿತ ಉತ್ತರ ಸಲ್ಲಿಸಿದ್ದಾರೆ ಎಂದು ಕೆಪಿಸಿಸಿ ಜಿಲ್ಲಾ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ತಿಳಿಸಿದ್ದಾರೆ.

ನಗರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಗರಾಜ ಹದ್ಲಿ ಅವರು ಆರ್ ಎಸ್ ಎಸ್ ಮುಖಂಡರನ್ನು ಭೇಟಿ ಮಾಡಿರುವ ಕುರಿತು ಪಕ್ಷದ ಗಮನಕ್ಕೆ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಪಕ್ಷದ ಶಿಸ್ತು ಮತ್ತು ಸಂಘಟನಾ ನಿಯಮಾವಳಿಯಂತೆ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು ಎಂದು ಹೇಳಿದರು.

ಈ ನೋಟಿಸ್ಗೆ ನಾಗರಾಜ ಹದ್ಲಿ ಅವರು ಈಗಾಗಲೇ ಲಿಖಿತ ಉತ್ತರ ಸಲ್ಲಿಸಿದ್ದು, ಅವರು ನೀಡಿರುವ ಉತ್ತರವನ್ನು ಪಕ್ಷದ ಜಿಲ್ಲಾ ಮಟ್ಟದಲ್ಲಿ ಪರಿಶೀಲಿಸಲಾಗುತ್ತಿದೆ. ನಂತರ ಸಂಪೂರ್ಣ ವರದಿಯನ್ನು ಕೆಪಿಸಿಸಿ ವರಿಷ್ಠರಿಗೆ ಕಳುಹಿಸಲಾಗುವುದು. ಅಂತಿಮ ನಿರ್ಧಾರವನ್ನು ಪಕ್ಷದ ವರಿಷ್ಠರೇ ಕೈಗೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತು ಮತ್ತು ಸೈದ್ಧಾಂತಿಕ ಬದ್ಧತೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ಯಾವುದೇ ದೂರು ಬಂದರೂ ಪಕ್ಷದ ನಿಯಮಾವಳಿಯಂತೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಈ ಪ್ರಕರಣದಲ್ಲಿಯೂ ಅದೇ ವಿಧಾನವನ್ನು ಅನುಸರಿಸಲಾಗುತ್ತಿದೆ ಎಂದು ನಂಜಯ್ಯನಮಠ ತಿಳಿಸಿದರು.

ಯಾವುದೇ ವ್ಯಕ್ತಿಯ ವಿರುದ್ಧ ಪೂರ್ವಾಗ್ರಹದಿಂದ ಕ್ರಮ ಕೈಗೊಳ್ಳುವ ಉದ್ದೇಶ ಪಕ್ಷಕ್ಕಿಲ್ಲ. ಸಂಬಂಧಪಟ್ಟವರಿಂದ ಸ್ಪಷ್ಟನೆ ಪಡೆದು, ವಾಸ್ತವಾಂಶಗಳ ಆಧಾರದ ಮೇಲೆ ವರದಿ ಸಲ್ಲಿಸಲಾಗುವುದು. ಅದರ ನಂತರ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಕ್ಷದ ಸಂಘಟನೆ ಬಲವರ್ಧನೆ, ಮುಂಬರುವ ಕಾರ್ಯಕ್ರಮಗಳು ಹಾಗೂ ವಿವಿಧ ರಾಜಕೀಯ ಬೆಳವಣಿಗೆಗಳ ಕುರಿತು ಸಹ ಚರ್ಚೆ ನಡೆಯಿತು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande