ಕೃಷಿ ಪಂಡಿತ ಪ್ರಶಸ್ತಿ : ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಕೊಪ್ಪಳ , 15 ಜುಲೈ (ಹಿ.ಸ.): ಆ್ಯಂಕರ್ : ಕೃಷಿ ಇಲಾಖೆಯಿಂದ 2026-27ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿ ಕಾರ್ಯಕ್ರಮದಡಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿ ಪಂಡಿತ ಪ್ರಶಸ್ತಿ ಕಾರ್ಯಕ್ರಮವು ಚಾಲ್ತಿ ಯೋಜನೆಯಾಗಿದ್ದು, 2026-27ನೇ ಸಾಲಿನಲ್ಲಿಯೂ ಮುಂದುವರಿಸಲಾಗಿರುತ್ತದೆ. ಕೃಷಿ
ಕೃಷಿ ಪಂಡಿತ ಪ್ರಶಸ್ತಿ : ಆನ್ಲೈನ್ ಮೂಲಕ ಅರ್ಜಿ ಆಹ್ವಾನ


ಕೊಪ್ಪಳ , 15 ಜುಲೈ (ಹಿ.ಸ.):

ಆ್ಯಂಕರ್ : ಕೃಷಿ ಇಲಾಖೆಯಿಂದ 2026-27ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿ ಕಾರ್ಯಕ್ರಮದಡಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕೃಷಿ ಪಂಡಿತ ಪ್ರಶಸ್ತಿ ಕಾರ್ಯಕ್ರಮವು ಚಾಲ್ತಿ ಯೋಜನೆಯಾಗಿದ್ದು, 2026-27ನೇ ಸಾಲಿನಲ್ಲಿಯೂ ಮುಂದುವರಿಸಲಾಗಿರುತ್ತದೆ. ಕೃಷಿ ಕ್ಷೇತ್ರದಲ್ಲಿ ವಿನೂತನ ಅಥವಾ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ರೈತರು ಈ ಯೋಜನೆಯಡಿ ಸ್ಪರ್ಧಿಸಬಹುದಾಗಿದೆ.

ಸಿಟಿಜನ್ ಲಾಗಿನ್ ಅಥವಾ ಆರ್.ಎಸ್.ಕೆ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ ಸ್ವತಃ ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಕೆ-ಕಿಸಾನ ಪೋರ್ಟಲ್ (K-Kisan Portal) ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಎಫ್ಐಡಿ (ಫಾರ್ಮರ್ಸ್ ಐಡೆಂಟಿಫಿಕೇಶನ್ ನಂಬರ್) ಯನ್ನು ಬಳಸಿಕೊಂಡು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಪ್ರಸಕ್ತ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು 2026ರ ಆಗಸ್ಟ್ 31 ಕೊನೆಯ ದಿನವಾಗಿರುತ್ತದೆ.

ಈ ಹಿಂದೆ ಕೃಷಿ ಪಂಡಿತ ಪ್ರಶಸ್ತಿ ಪಡೆದವರು ಮತ್ತೆ ಸ್ಪರ್ಧಿಸುವಂತಿಲ್ಲ. ಕೇಂದ್ರ ಅಥವಾ ರಾಜ್ಯ ಸರ್ಕಾರಿ ಸೇವಯಲ್ಲಿರುವ ಯಾವುದೇ ಇಲಾಖೆ, ವಿಶ್ವವಿದ್ಯಾಲಯ ಅಥವಾ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ನೌಕರರು ಮತ್ತು ಅವರ ಕುಟುಂಬದ ಸದಸ್ಯರು ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ. ಆದರೆ ಕೃಷಿ ಮತ್ತು ಕೃಷಿ ಸಂಬಂಧಿತವಾದ ಜಲಾನಯನ ಅಭಿವೃದ್ದಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ ಮತ್ತು ಪಶು ವೈದ್ಯಕೀಯ ಇಲಾಖೆ, ವಿಶ್ವವಿದ್ಯಾಲಯ ಅಥವಾ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ತಾಂತ್ರಿಕ ಹುದ್ದೆಗಳಲ್ಲಿ ಕೆಲಸ ನಿರ್ವಹಿಸಿ ನಿವೃತ್ತರಾದ ನೌಕರರು ಮತ್ತು ಅವರ ಕುಟುಂಬ ವರ್ಗದವರನ್ನು ಹೊರತುಪಡಿಸಿ ಈ ಇಲಾಖೆಗಳಲ್ಲಿನ ನಿವೃತ ತಾಂತ್ರಿಕೇತರ ನೌಕರರು ಮತ್ತು ಈ ಇಲಾಖೆಗಳನ್ನು ಹೊರತುಪಡಿಸಿ ಉಳಿದ ಇಲಾಖೆಗಳ ನಿವೃತ್ತ ನೌಕರರು ಮತ್ತು ಅವರ ಕುಟುಂಬದವರು ಭಾಗವಹಿಸಬಹುದು.

ಕೊಪ್ಪಳ ಜಿಲ್ಲೆಯ ರೈತ ಬಾಂಧವರು ಕೃಷಿ ಪಂಡಿತ ಪ್ರಶಸ್ತಿ ಕಾರ್ಯಕ್ರಮದಡಿ ಹೆಚ್ಚಿನ ಸಂಖ್ಯೆಯಲ್ಲಿ ನೋದಣಿ ಮಾಡಿಕೊಳ್ಳಬೇಕೆಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande