
ರಾಯಚೂರು , 15 ಜುಲೈ (ಹಿ.ಸ.):
ಆ್ಯಂಕರ್ : ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿಯ ಅಧ್ಯಕ್ಷರಾದ ಪಾಮಯ್ಯ ಮುರಾರಿ ಅವರು ಅಧ್ಯಕ್ಷತೆಯಲ್ಲಿ ಜುಲೈ 16ರ ಬೆಳಿಗ್ಗೆ 11ಗಂಟೆಗೆ ನಗರದ ಜಿಲ್ಲಾ ಪಂಚಾಯತಿಯ ಜಲ ನಿರ್ಮಲ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಸಮಿತಿಯ ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಸಂಬಂಧಪಟ್ಟ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಗೆ ಹಾಜರಾಗುವಂತೆ ಜಿಲ್ಲಾ ಮಟ್ಟದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್