
ಕೊಪ್ಪಳ, 15 ಜುಲೈ (ಹಿ.ಸ.):
ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ಕಾರ್ಯ ಪ್ರಗತಿಯಲ್ಲಿದ್ದು, ಜೂನ್ 30 ರಿಂದ ಜುಲೈ 14 ರ ಸಂಜೆ 06 ಗಂಟೆಯವರೆಗೆ ಒಟ್ಟು 6,71,803 ಗಣತಿ ನಮೂನೆಗಳ ಡಿಜಿಟಲೀಕರಣ ಕಾರ್ಯ ಪೂರ್ಣಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು 11,90,214 ಮತದಾರರಿದ್ದು, ಈ ಎಲ್ಲಾ ಮತದಾರರ ಮುದ್ರಿತವಾಗಿರುವ ಗಣತಿ ನಮೂನೆಗಳನ್ನು ಈಗಾಗಲೇ ಸಂಬಂಧಪಟ್ಟ ಬೂತ್ ಮಟ್ಟದ ಅಧಿಕಾರಿಗಳಿಂದ ವಿತರಿಸಲಾಗಿದೆ. ಇಲ್ಲಿವರೆಗೆ ಒಟ್ಟು 6,71,803 ಗಣತಿ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್