
ನವದೆಹಲಿ, 15 ಜುಲೈ (ಹಿ.ಸ.):
ಆ್ಯಂಕರ್:
ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದ್ದ ವೇಳೆ ಗಲಾಟೆ ನಡೆಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಇಬ್ಬರು ಕಾನೂನು ವಿದ್ಯಾರ್ಥಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಜುಲೈ 10ರಂದು ನ್ಯಾಯಾಲಯದ ಕೊಠಡಿ ಸಂಖ್ಯೆ–13ರಲ್ಲಿ ವಿಚಾರಣೆ ನಡೆಯುತ್ತಿದ್ದ ವೇಳೆ ಅರ್ಜಿದಾರನಾಗಿದ್ದ ಪ್ರಬಲ್ ಪ್ರತಾಪ್ ಸಿಂಗ್ ನ್ಯಾಯಾಲಯದ ಕಾರ್ಯವಿಧಾನಕ್ಕೆ ಅಡ್ಡಿಪಡಿಸಿ ಅಸಭ್ಯ ಭಾಷೆ ಬಳಸಿದ್ದಲ್ಲದೆ, ದಾಖಲೆಗಳು ಮತ್ತು ಕರಪತ್ರಗಳನ್ನು ಎಸೆದಿದ್ದಾನೆ ಎಂದು ಆರೋಪಿಸಲಾಗಿದೆ. ತಡೆಯಲು ಮುಂದಾದ ಭದ್ರತಾ ಸಿಬ್ಬಂದಿಯೊಂದಿಗೆ ತಳ್ಳಾಟ ನಡೆಸಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ತಿಲಕ್ ಮಾರ್ಗ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿ, ಪ್ರಬಲ್ ಪ್ರತಾಪ್ ಸಿಂಗ್ ಹಾಗೂ ಚಂದರ್ ಭಾನ್ ಅವರನ್ನು ಬಂಧಿಸಲಾಗಿದೆ. ನ್ಯಾಯಾಲಯವು ಇಬ್ಬರನ್ನೂ ಎರಡು ದಿನಗಳ ಪೊಲೀಸ್ ವಶಕ್ಕೆ ನೀಡಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.
ಸುಪ್ರೀಂ ಕೋರ್ಟ್ ಸೂಚನೆಯಂತೆ ಇಬ್ಬರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ತಕ್ಷಣದ ಮಾನಸಿಕ ಚಿಕಿತ್ಸೆಯ ಅಗತ್ಯವಿಲ್ಲ ಎಂದು ವೈದ್ಯಕೀಯ ವರದಿಯಲ್ಲಿ ತಿಳಿಸಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.