ಸ್ವಉದ್ಯೋಗದ ಮೂಲಕ ಮಹಿಳೆಯರು ಆರ್ಥಿಕ ಅಭಿವೃದ್ಧಿ ಹೊಂದಿ : ರಾಮಕೃಷ್ಣ
ಬಳ್ಳಾರಿ, 15 ಜುಲೈ (ಹಿ.ಸ.): ಆ್ಯಂಕರ್ : ಗ್ರಾಮೀಣ ಭಾಗದ ಮಹಿಳೆಯರು ಟೈಲರಿಂಗ್ ಹಾಗೂ ವಸ್ತ್ರವಿನ್ಯಾಸ ತರಬೇತಿ ಪಡೆದು ಸ್ವಉದ್ಯೋಗ ಕೈಗೊಳ್ಳುವ ಮೂಲಕ ತಮ್ಮ ಕುಟುಂಬದ ಆರ್ಥಿಕ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕ ರಾಮಕೃಷ್ಣ ಅವರು ಹೇಳಿದ್ದಾರೆ. ನಗರದ
Women should be economically developed: Ramakrishna


Women should be economically developed: Ramakrishna


ಬಳ್ಳಾರಿ, 15 ಜುಲೈ (ಹಿ.ಸ.):

ಆ್ಯಂಕರ್ : ಗ್ರಾಮೀಣ ಭಾಗದ ಮಹಿಳೆಯರು ಟೈಲರಿಂಗ್ ಹಾಗೂ ವಸ್ತ್ರವಿನ್ಯಾಸ ತರಬೇತಿ ಪಡೆದು ಸ್ವಉದ್ಯೋಗ ಕೈಗೊಳ್ಳುವ ಮೂಲಕ ತಮ್ಮ ಕುಟುಂಬದ ಆರ್ಥಿಕ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕ ರಾಮಕೃಷ್ಣ ಅವರು ಹೇಳಿದ್ದಾರೆ.

ನಗರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಆವರಣದಲ್ಲಿ ಸಂಸ್ಥೆಯ ವತಿಯಿಂದ ಗ್ರಾಮೀಣ ಭಾಗದ ಮಹಿಳೆಯರಿಗಾಗಿ ಮಂಗಳವಾರದಂದು ಹಮ್ಮಿಕೊಂಡ 31 ದಿನಗಳ ಉಚಿತ ಮಹಿಳೆಯರ ವಸ್ತ್ರವಿನ್ಯಾಸ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಇಂತಹ ತರಬೇತಿಗಳು ಸಹಕಾರಿಯಾಗಲಿವೆ ಎಂದರು.

ಕಾರ್ಯಕ್ರಮದಲ್ಲಿ ಹಗರಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಡಾ. ಪಾಲಯ್ಯ ಹಾಗೂ ಡಾ. ರವಿಕುಮಾರ್ ಅವರು ಭಾಗವಹಿಸಿ ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ವಿನಯ್ ಕುಮಾರ್ ಬಿ. ಕೊಳ್ಳೂರ್ ಮಠ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸಂಸ್ಥೆಯ ವತಿಯಿಂದ ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕಾಗಿ ಹಮ್ಮಿಕೊಳ್ಳಲಾಗುತ್ತಿರುವ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ವ್ಯವಸ್ಥಾಪಕ ವಿಜಯ ಕುಮಾರ, ಜಿಲ್ಲಾ ಪಂಚಾಯತ್ನ ಎನ್ಆರ್ಎಲ್ಎಂ ಸಿಬ್ಬಂದಿ ರಘುವರ್ಮ, ಸಂಸ್ಥೆಯ ಉಪನ್ಯಾಸಕರುಗಳಾದ ಜಡೆಪ್ಪ ಜಿ. ಮತ್ತು ದಿನೇಶ್ ಕುಮಾರ್ ಜಿ., ಸಿಬ್ಬಂದಿಗಳಾದ ಸಿದ್ದಲಿಂಗಮ್ಮ ಹಾಗೂ ಸಂತೋಷ್ ಕುಮಾರ್ ಸೇರಿದಂತೆ ಜಿಲ್ಲೆಯ ವಿವಿಧ ಗ್ರಾಮೀಣ ಭಾಗಗಳಿಂದ ಬಂದಿದ್ದ ಒಟ್ಟು 35 ಮಹಿಳಾ ಶಿಬಿರಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande