ಬಳ್ಳಾರಿ : ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಾಜ್ಞೆ
ಬಳ್ಳಾರಿ, 16 ಜುಲೈ (ಹಿ.ಸ.) ಆ್ಯಂಕರ್ : ನಗರದಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಜುಲೈ 17 ರಿಂದ 19 ರ ವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಮಧ್ಯಾಹ್ನ 02 ರಿಂದ ಸಂಜೆ 04 ರವರೆಗೆ 2026ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯನ್ನು ಸು
ಬಳ್ಳಾರಿ : ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಾಜ್ಞೆ


ಬಳ್ಳಾರಿ, 16 ಜುಲೈ (ಹಿ.ಸ.)

ಆ್ಯಂಕರ್ : ನಗರದಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಜುಲೈ 17 ರಿಂದ 19 ರ ವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಮಧ್ಯಾಹ್ನ 02 ರಿಂದ ಸಂಜೆ 04 ರವರೆಗೆ 2026ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯನ್ನು ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶಿಸಿದ್ದಾರೆ.

ಬಳ್ಳಾರಿ ನಗರದ ಸರ್ಕಾರಿ ಬಾಲಕಿಯರ ಪಿಯು ಕಾಲೇಜು (ಪ್ರೌಢಶಾಲಾ ವಿಭಾಗ) ಪರೀಕ್ಷಾ ಕೇಂದ್ರದಲ್ಲಿ ಈ ಪರೀಕ್ಷೆ ನಡೆಯಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರ ಅಡಿಯಲ್ಲಿ ತಮಗಿರುವ ಅಧಿಕಾರವನ್ನು ಚಲಾಯಿಸಿ ಈ ಆದೇಶವನ್ನು ಹೊರಡಿಸಿದ್ದಾರೆ.

ಪರೀಕ್ಷಾ ಕೇಂದ್ರದ ಸುತ್ತಮುತ್ತ ಅನಧಿಕೃತ ವ್ಯಕ್ತಿಗಳು ಹಾಗೂ ವ್ಯಕ್ತಿಗಳ ಗುಂಪುಗಳು ಜಮಾಯಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಎಲ್ಲಾ ಜೆರಾಕ್ಸ್ ಅಂಗಡಿಗಳು ಹಾಗೂ ಇಂಟರ್ನೆಟ್ ಸೆಂಟರ್ಗಳು ಕಾರ್ಯನಿರ್ವಹಿಸದಂತೆ ಕಟ್ಟುನಿಟ್ಟಿನ ಪ್ರತಿಬಂಧಕ ಆದೇಶ ಜಾರಿಗೊಳಿಸಲಾಗಿದೆ.

ಈ ಕಟ್ಟುನಿಟ್ಟಿನ ನಿಯಮಗಳು ಪರೀಕ್ಷೆಯ ಮೇಲ್ವಿಚಾರಣೆ ಹಾಗೂ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ವರ್ಗದವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande