
ಬಳ್ಳಾರಿ, 16 ಜುಲೈ (ಹಿ.ಸ.)
ಆ್ಯಂಕರ್ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ನಾಗರಿಕ ಸೇವಾ ಪರೀಕ್ಷಾ (ಯು.ಪಿ.ಎಸ್.ಸಿ.) ಪೂರ್ವ ತರಬೇತಿಗೆ ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಅರ್ಹತೆಗಳು:
ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರೊಂದು ಪದವಿ ಪಡೆದಿರಬೇಕು. ಅಭ್ಯರ್ಥಿಯ ಹಾಗೂ ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ ರೂ.5 ಲಕ್ಷಗಳ ಒಳಗಿರಬೇಕು. ಅಭ್ಯರ್ಥಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ರವರು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ಗಳಿಸಿದ ಅಂಕ, ಪ್ರವರ್ಗ ಹಾಗೂ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಪರೀಕ್ಷಾ ಕೇಂದ್ರಗಳು, ದಿನಾಂಕ ಮತ್ತು ಸಮಯವನ್ನು ನಂತರದ ದಿನಗಳಲ್ಲಿ ಇಲಾಖಾ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು. ಅಭ್ಯರ್ಥಿಗಳಿಗೆ ಇಲಾಖೆಯಿಂದಲೇ ಉಚಿತ ಊಟ ಹಾಗೂ ವಸತಿಯೊಂದಿಗೆ ತರಬೇತಿಯನ್ನು ನೀಡಲಾಗುವುದು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 03 ರ ವರೆಗೆ ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ https://bcwd.karnataka.gov.in ಅಥವಾ ನಗರದ ಜೋಳದರಾಶಿ ದೊಡ್ಡನಗೌಡ ರಂಗಮ0ದಿರ ಹತ್ತಿರದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ (ಮೊ.8050770004) ಗೆ ಭೇಟಿ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್