ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಬಳ್ಳಾರಿ, 16 ಜುಲೈ (ಹಿ.ಸ.) ಆ್ಯಂಕರ್ : ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ನೀಡಲಾಗುವ “ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ” ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಮತ್ತು ಸಂಸ್ಥೆಗಳಿಗೆ
ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ


ಬಳ್ಳಾರಿ, 16 ಜುಲೈ (ಹಿ.ಸ.)

ಆ್ಯಂಕರ್ : ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ನೀಡಲಾಗುವ “ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ” ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಮತ್ತು ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಮಕ್ಕಳು ತಮ್ಮ ಪ್ರಾಣದ ಹಂಗನ್ನು ರಕ್ಷಣೆಗಾಗಿ ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಧೈರ್ಯ-ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ನೀಡಲಾಗುವುದು.

ಪ್ರಕರಣವು 2025 ರ ಆಗಸ್ಟ್ 01 ರಿಂದ 2026 ರ ಜುಲೈ 31 ರೊಳಗೆ ನಡೆದಿರುವ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮಕ್ಕಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.

ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1 ಲಕ್ಷ ನಗದು ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುತ್ತದೆ.

ಅರ್ಜಿ ಸಲ್ಲಿಸಲು ಹಾಗೂ ಅರ್ಜಿ ನಮೂನೆಗಳನ್ನು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಪಡೆದು, ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ, ಅರ್ಜಿಗಳನ್ನು ಜುಲೈ 31 ರೊಳಗೆ ಇದೇ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.08392-266219 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande