ಚಿನ್ನದ ಬೆಲೆ ಏರಿಕೆ; ಬೆಳ್ಳಿ ದರ ಸ್ಥಿರ
ನವದೆಹಲಿ, 16 ಜುಲೈ (ಹಿ.ಸ.): ಆ್ಯಂಕರ್: ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಗುರುವಾರ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, ಬೆಳ್ಳಿ ದರದಲ್ಲಿ ಸತತ ನಾಲ್ಕನೇ ದಿನವೂ ಯಾವುದೇ ಬದಲಾವಣೆ ಆಗಿಲ್ಲ. ದೇಶದ ಬಹುತೇಕ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹720 ರಿಂದ ₹790ರವರೆಗೆ ಏರ
ಸಾಂಕೇತಿಕ


ನವದೆಹಲಿ, 16 ಜುಲೈ (ಹಿ.ಸ.):

ಆ್ಯಂಕರ್:

ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಗುರುವಾರ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, ಬೆಳ್ಳಿ ದರದಲ್ಲಿ ಸತತ ನಾಲ್ಕನೇ ದಿನವೂ ಯಾವುದೇ ಬದಲಾವಣೆ ಆಗಿಲ್ಲ.

ದೇಶದ ಬಹುತೇಕ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹720 ರಿಂದ ₹790ರವರೆಗೆ ಏರಿಕೆಯಾಗಿ ₹1,43,580 ರಿಂದ ₹1,43,790ರ ನಡುವೆ ವಹಿವಾಟಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹1,31,610 ರಿಂದ ₹1,31,810ರ ಮಟ್ಟದಲ್ಲಿದೆ. ಚೆನ್ನೈನಲ್ಲಿ ಚಿನ್ನದ ದರವು ₹320 ರಿಂದ ₹340ರವರೆಗೆ ಏರಿಕೆಯಾಗಿದೆ.

ರಾಜಧಾನಿ ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನ ₹1,43,730 ಹಾಗೂ 22 ಕ್ಯಾರೆಟ್ ಚಿನ್ನ ₹1,31,760ಕ್ಕೆ ಮಾರಾಟವಾಗುತ್ತಿದೆ. ಮುಂಬೈ, ಬೆಂಗಳೂರು, ಹೈದರಾಬಾದ್, ಭುವನೇಶ್ವರ ಮತ್ತು ಕೊಲ್ಕತ್ತಾದಲ್ಲಿ 24 ಕ್ಯಾರೆಟ್ ಚಿನ್ನ ₹1,43,580 ಹಾಗೂ 22 ಕ್ಯಾರೆಟ್ ಚಿನ್ನ ₹1,31,610ಕ್ಕೆ ವಹಿವಾಟು ನಡೆದಿದೆ.

ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಇಲ್ಲದ ಕಾರಣ ದೆಹಲಿ ಮಾರುಕಟ್ಟೆಯಲ್ಲಿ ಪ್ರತಿ ಕಿಲೋಗ್ರಾಂ ಬೆಳ್ಳಿ ₹2,34,900ರಲ್ಲೇ ಸ್ಥಿರವಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande