ಒಂದು ದಿನದ ಉದ್ಯಮಶೀಲತಾ ತರಬೇತಿಗೆ ಅರ್ಜಿ ಆಹ್ವಾನ
ಬಳ್ಳಾರಿ, 16 ಜುಲೈ (ಹಿ.ಸ.) ಆ್ಯಂಕರ್ : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಇವರ ವತಿಯಿಂದ ಸ್ವಂತ ಉದ್ಯೋಗ ಸ್ಥಾಪಿಸಲು ಇಚ್ಚಿಸುವವರಿಗಾಗಿ ಒಂದು ದಿನದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ನೀಡಲು ಉದ್
ಒಂದು ದಿನದ ಉದ್ಯಮಶೀಲತಾ ತರಬೇತಿಗೆ ಅರ್ಜಿ ಆಹ್ವಾನ


ಬಳ್ಳಾರಿ, 16 ಜುಲೈ (ಹಿ.ಸ.)

ಆ್ಯಂಕರ್ : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಇವರ ವತಿಯಿಂದ ಸ್ವಂತ ಉದ್ಯೋಗ ಸ್ಥಾಪಿಸಲು ಇಚ್ಚಿಸುವವರಿಗಾಗಿ ಒಂದು ದಿನದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿಯಲ್ಲಿ ಸ್ವಂತ ಉದ್ಯಮ ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ ಇತ್ಯಾದಿ ವಿಷಯಗಳ ಕುರಿತು ತರಬೇತಿ ನೀಡಲಾಗುವುದು.

ಆಸಕ್ತ ಬಳ್ಳಾರಿ ಜಿಲ್ಲೆಯವರು ಅರ್ಜಿ ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಾಗೂ ಹಿಂದುಳಿ0ದ ವರ್ಗದ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು 18 ವರ್ಷ ದಿಂದ 45 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಓದಲು, ಬರೆಯಲು ಬರುತ್ತಿರಬೇಕು.

ಅರ್ಜಿಯನ್ನು ನಗರದ ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿ ಕಟ್ಟಡದ ಸಿಡಾಕ್ನ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು ಅಥವಾ ದೂರವಾಣಿ ಮೂಲಕ ನೋಂದಾಯಿಸಿಕೊಳ್ಳಬಹುದು. ಅರ್ಜಿ ಸಲ್ಲಿಸಲು ಅಥವಾ ನೋಂದಾಯಿಸಿಕೊಳ್ಳಲು ಜುಲೈ 21 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿ ಕಟ್ಟಡದ ಸಿಡಾಕ್ನ ಜಂಟಿ ನಿರ್ದೇಶಕರ ಕಚೇರಿ ಅಥವಾ ಮೊ.9449226221, 7483538942 ಗೆ ಸಂಪರ್ಕಿಸಬಹುದು ಎಂದು ಸಿಡಾಕ್ನ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande