ಕೆಮಿಕಲ್ ಮಿಶ್ರಿತ ಹಾಲು ಪೂರೈಕೆ :ಕ್ರಮಕ್ಕೆ ಮಾಜಿ ಸಚಿವ ಪಟ್ಟಣಶೆಟ್ಟಿ ಒತ್ತಾಯ
ವಿಜಯಪುರ, 16 ಜುಲೈ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಕೆಮಿಕಲ್ ಮಿಶ್ರಿತ (ವಿಷಕಾರಿ) ಹಾಲಿನ ಪೂರೈಕೆ ನಡೆಯುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.
ಡಿಸಿ


ವಿಜಯಪುರ, 16 ಜುಲೈ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಕೆಮಿಕಲ್ ಮಿಶ್ರಿತ (ವಿಷಕಾರಿ) ಹಾಲಿನ ಪೂರೈಕೆ ನಡೆಯುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ, ಆಹಾರ ಪದಾರ್ಥಗಳಲ್ಲಿ ಕಲಬೆರಕೆ ಹಾಗೂ ನಕಲಿ ಉತ್ಪನ್ನಗಳ ತಯಾರಿಕೆ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಅದರಲ್ಲೂ ಪ್ರತಿನಿತ್ಯ ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಬಳಸುವ ಪ್ರಮುಖ ಆಹಾರ ಪದಾರ್ಥವಾದ ಹಾಲಿನಲ್ಲೇ ಕೆಮಿಕಲ್ ಬಳಸಿ ಕೃತಕವಾಗಿ ತಯಾರಿಸಿದ ವಿಷಕಾರಿ ಹಾಲು ಪೂರೈಕೆ ಆಗುತ್ತಿದೆ ಎಂಬ ಮಾಹಿತಿ ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ ಎಂದು ಹೇಳಿದ್ದಾರೆ.

ವಿಜಯಪುರ ಜಿಲ್ಲೆ ಮಹಾರಾಷ್ಟ್ರ ರಾಜ್ಯದ ಗಡಿಯನ್ನು ಹಂಚಿಕೊಂಡಿರುವುದರಿಂದ, ಗಡಿ ಭಾಗ ಸೇರಿದಂತೆ ಕೆಲವು ತಾಲೂಕುಗಳಿಂದ ಹಲವು ತಿಂಗಳುಗಳಿಂದ ಕೆಮಿಕಲ್ ಮಿಶ್ರಿತ ಹಾಲು ಜಿಲ್ಲೆ ಹಾಗೂ ನಗರಕ್ಕೆ ಸರಬರಾಜು ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಯಾವುದೇ ಕಂಪನಿಯ ಅಧಿಕೃತ ಪ್ಯಾಕೆಟ್ಗಳಿಲ್ಲದೆ ಕ್ಯಾನ್ಗಳಲ್ಲಿ ಹಾಲನ್ನು ಸಾಗಿಸಿ ಮನೆ ಮನೆಗೆ ವಿತರಣೆ ಮಾಡಲಾಗುತ್ತಿದೆ ಎಂದು ಅವರು ಗಮನ ಸೆಳೆದಿದ್ದಾರೆ.

ಈ ಹಿನ್ನೆಲೆಯಲ್ಲಿ ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಹಾಲು ಪರೀಕ್ಷಾ ಪ್ರಯೋಗಾಲಯಗಳನ್ನು (ಲ್ಯಾಬ್) ಸ್ಥಾಪಿಸಬೇಕು. ಹಾಲು ವಿತರಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಹಾಲಿನ ಗುಣಮಟ್ಟ ಪರೀಕ್ಷೆ ನಡೆಸಿದ ಬಳಿಕವೇ ಸಾರ್ವಜನಿಕರಿಗೆ ವಿತರಿಸುವಂತೆ ಜಿಲ್ಲಾಡಳಿತ ಆದೇಶ ಹೊರಡಿಸಬೇಕು ಎಂದು ಮನವಿ ಮಾಡಿದ್ದಾರೆ.

ಇದೇ ವೇಳೆ, ನಿರ್ಜನ ಪ್ರದೇಶಗಳಲ್ಲಿ ಇಂತಹ ವಿಷಕಾರಿ ಹಾಲು ತಯಾರಿಸಲಾಗುತ್ತಿದೆ ಎಂಬ ಅನುಮಾನ ವ್ಯಕ್ತಪಡಿಸಿರುವ ಅವರು, ಇಂತಹ ಹಾಲನ್ನು ಸೇವಿಸುವುದರಿಂದ ಸಾರ್ವಜನಿಕರಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು. ಜನರ ಜೀವದೊಂದಿಗೆ ಚೆಲ್ಲಾಟವಾಡುತ್ತಿರುವ ಇಂತಹ ಕೃತ್ಯಗಳಲ್ಲಿ ತೊಡಗಿರುವವರನ್ನು ತಕ್ಷಣವೇ ಪತ್ತೆಹಚ್ಚಿ, ಕಾನೂನು ಪ್ರಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದರು.

ಆಹಾರ ಸುರಕ್ಷತೆ ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಆಹಾರ ಸುರಕ್ಷತಾ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಸಂಬಂಧಿಸಿದ ಅಧಿಕಾರಿಗಳ ಸಮನ್ವಯದಲ್ಲಿ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸುವಂತೆ ಅವರು ಮನವಿಯಲ್ಲಿ ಆಗ್ರಹಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande