ಉಚಿತ ಯು.ಪಿ.ಎಸ್.ಸಿ ತರಬೇತಿ: ಆನ್ಲೈನ್ ಅರ್ಜಿ ಆಹ್ವಾನ
ಕೊಪ್ಪಳ, 16 ಜುಲೈ (ಹಿ.ಸ.) ಆ್ಯಂಕರ್: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2026-27ನೇ ಸಾಲಿನಲ್ಲಿ ಯು.ಪಿ.ಎಸ್.ಸಿ ನಾಗರಿಕ ಸೇವಾ ಪರೀಕ್ಷಾ ಪೂರ್ವ ತರಬೇತಿಯನ್ನು ಉಚಿತ ಊಟ ಹಾಗೂ ವಸತಿಯೊಂದಿಗೆ ನೀಡಲು ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್
ಉಚಿತ ಯು.ಪಿ.ಎಸ್.ಸಿ ತರಬೇತಿ: ಆನ್ಲೈನ್ ಅರ್ಜಿ ಆಹ್ವಾನ


ಕೊಪ್ಪಳ, 16 ಜುಲೈ (ಹಿ.ಸ.)

ಆ್ಯಂಕರ್: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2026-27ನೇ ಸಾಲಿನಲ್ಲಿ ಯು.ಪಿ.ಎಸ್.ಸಿ ನಾಗರಿಕ ಸೇವಾ ಪರೀಕ್ಷಾ ಪೂರ್ವ ತರಬೇತಿಯನ್ನು ಉಚಿತ ಊಟ ಹಾಗೂ ವಸತಿಯೊಂದಿಗೆ ನೀಡಲು ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರೊಂದು ಪದವಿ ಪಡೆದಿರಬೇಕು. ಅಭ್ಯರ್ಥಿಯು ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಅಥವಾ 3(ಬಿ) ಗೆ ಸೇರಿರಬೇಕು. ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ ರೂ. 5 ಲಕ್ಷದೊಳಗಿರಬೇಕು. ಅಭ್ಯರ್ಥಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ರವರು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳು, ಪ್ರವರ್ಗ ಹಾಗೂ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಪರೀಕ್ಷಾ ಕೇಂದ್ರಗಳು, ದಿನಾಂಕ ಮತ್ತು ಸಮಯವನ್ನು ನಂತರದ ದಿನಗಳಲ್ಲಿ ಇಲಾಖಾ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು. ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಇಲಾಖೆಯಿಂದಲೇ ಉಚಿತ ಊಟ ಹಾಗೂ ವಸತಿಯೊಂದಿಗೆ ತರಬೇತಿಯನ್ನು ನೀಡುವ ಹಿನ್ನೆಲೆಯಲ್ಲಿ ಯಾವುದೇ ತರಬೇತಿ ಭತ್ಯೆಯನ್ನು ನೀಡಲಾಗುವುದು.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 3 ಆಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವೆಬ್ಸೈಟ್ https://bcwd.karnataka.gov.in ಅಥವಾ sevasindhuservices.karnataka.gov.in. ಅನ್ನು ನೋಡವುದು. ಸಹಾಯ ವಾಣಿ: 8050770004 (ಸಮಯ ಬೆಳಿಗ್ಗೆ 10 ರಿಂದ ಸಂಜೆ 5.30ರ ವರೆಗೆ, ಸಾರ್ವಜನಿಕ ರಜಾ ದಿನಗಳನ್ನು ಹೊರತು ಪಡಿಸಿ) ಸಂಪರ್ಕಿಸಬಹುದು ಎಂದು ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande