
ಸಿರುಗುಪ್ಪ, 16 ಜುಲೈ (ಹಿ.ಸ.)
ಆ್ಯಂಕರ್ : ಜೆಸ್ಕಾಂ ಸಿರುಗುಪ್ಪ ಉಪ-ವಿಭಾಗದ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ವಿದ್ಯುತ್ ಕುಂದು ಕೊರತೆಗಳನ್ನು ಮತ್ತು ಎಸ್ಓಪಿ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜುಲೈ 18 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ಸಿರುಗುಪ್ಪದ ಜೆಸ್ಕಾಂ ಉಪ-ವಿಭಾಗ ಕಚೇರಿಯಲ್ಲಿ ಜೆಸ್ಕಾಂ ಗ್ರಾಹಕರ ಕುಂದು ಕೊರತೆ ನಿವಾರಣೆ ಹಾಗೂ ಜಾಗೃತಿ ಸಭೆ ಆಯೋಜಿಸಲಾಗಿದೆ.
ಕಾರ್ಯ ಮತ್ತು ಪಾಲನಾ ಉಪ-ವಿಭಾಗದ ಅಧಿಕಾರಿಗಳು ಈ ಸಭೆಯಲ್ಲಿ ಉಪಸ್ಥಿತರಿರಲಿದ್ದು, ಗ್ರಾಹಕರು ತಮ್ಮ ವಿದ್ಯುತ್ ಸರಬರಾಜು, ಬಿಲ್ಲಿಂಗ್ ಸಮಸ್ಯೆಗಳು, ಹಾಗೂ ಇತರೆ ತಾಂತ್ರಿಕ ತೊಂದರೆಗಳಿಗೆ ಸ್ಥಳದಲ್ಲೇ ಸೂಕ್ತ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ.
ಸಿರುಗುಪ್ಪ ಉಪ-ವಿಭಾಗದ ವ್ಯಾಪ್ತಿಗೆ ಒಳಪಡುವ ಎಲ್ಲಾ ಸಾರ್ವಜನಿಕರು ಮತ್ತು ಜೆಸ್ಕಾಂ ಗ್ರಾಹಕರು ಈ ಸಭೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಮೂಲಕ ಈ ಮುಕ್ತ ಅವಕಾಶದ ಸದುಪಯೋಗ ಪಡಿಸಿಕೊಳ್ಳಬೇಕಾಗಿ ಜೆಸ್ಕಾಂ ಸಿರುಗುಪ್ಪ ಕಾರ್ಯ ಮತ್ತು ಪಾಲನಾ ಉಪ-ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್