ನಾಳೆ ಕನಕಗಿರಿಯಲ್ಲಿ ಐಟಿನರರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯದ ಉದ್ಘಾಟನೆ
ಕನಕಗಿರಿ, 16 ಜುಲೈ (ಹಿ.ಸ.) ಆ್ಯಂಕರ್: ಜಿಲ್ಲಾ ನ್ಯಾಯಾಂಗ, ಕೊಪ್ಪಳ ಮತ್ತು ಬಾರ್ ಅಸೋಸಿಯೇಷನ್, ಗಂಗಾವತಿ ಇವರ ಸಹಯೋಗದಲ್ಲಿ ಕನಕಗಿರಿಯಲ್ಲಿ ಹೊಸದಾಗಿ ಸ್ಥಾಪಿಸಲಾದ ಐಟಿನರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದ ಉದ್ಘಾಟನಾ (ವರ್ಚುವಲ್) ಸಮಾರಂಭವನ್ನು ಜುಲೈ 17 ರಂದು ಬೆಳಿಗ್ಗೆ
ITnagary Civil and JMFC Court to be inaugurated in Kanakagiri on July 17


ಕನಕಗಿರಿ, 16 ಜುಲೈ (ಹಿ.ಸ.)

ಆ್ಯಂಕರ್:

ಜಿಲ್ಲಾ ನ್ಯಾಯಾಂಗ, ಕೊಪ್ಪಳ ಮತ್ತು ಬಾರ್ ಅಸೋಸಿಯೇಷನ್, ಗಂಗಾವತಿ ಇವರ ಸಹಯೋಗದಲ್ಲಿ ಕನಕಗಿರಿಯಲ್ಲಿ ಹೊಸದಾಗಿ ಸ್ಥಾಪಿಸಲಾದ ಐಟಿನರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದ ಉದ್ಘಾಟನಾ (ವರ್ಚುವಲ್) ಸಮಾರಂಭವನ್ನು ಜುಲೈ 17 ರಂದು ಬೆಳಿಗ್ಗೆ 9.30 ಗಂಟೆಗೆ ಕನಕಗಿರಿಯ ಎಪಿಎಂಸಿ ಆವರಣದಲ್ಲಿರುವ ಶ್ರಮಿಕ ಭವನದಲ್ಲಿ ಆಯೋಜಿಸಲಾಗಿದೆ.

ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಮತ್ತು ಕೊಪ್ಪಳ ಜಿಲ್ಲೆಯ ಆಡಳಿತ ನ್ಯಾಯಾಧೀಶರಾದ ನ್ಯಾಯಮೂರ್ತಿ ಸಿಎಂ ಪೂಣಚ್ಚ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕನಕಗಿರಿ ಶಾಸಕರಾದ ಶಿವರಾಜ್ ತಂಗಡಗಿ ಅವರು ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಚಂದ್ರ ಶೇಖರ್ ಸಿ. ಅವರು ಉಪಸ್ಥಿತಿ ವಹಿಸಲಿದ್ದಾರೆ.

ಅತಿಥಿಗಳಾಗಿ ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಮಾಜಿ ಅಧ್ಯಕ್ಷರಾದ ಎನ್.ಎಸ್. ಪಾಟೀಲ್, ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ. ಸುರೇಶ್ ಬಿ. ಇಟ್ನಾಳ, ಕನಕಗಿರಿ ಎಪಿಎಂಸಿ ಕಾರ್ಯದರ್ಶಿ ಎಸ್ಎಂಟಿ. ಸಾವಿತ್ರಿ ಅವರು ಪಾಲ್ಗೊಳ್ಳುವರು.

ಕಾರ್ಯಕ್ರಮದಲ್ಲಿ ಗಂಗಾವತಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಎಂ. ಮಂಜುನಾಥ, ಗಂಗಾವತಿ ವಕೀಲರ ಸಂಘದ ಅಧ್ಯಕ್ಷರಾದ ಶರಣಬಸಪ್ಪ ಎನ್ ನಾಯಕ, ಕೊಪ್ಪಳ ಕೆಆರ್ಐಡಿಎಲ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿಲ್ ಪಾಟೀಲ್ ಹಾಗೂ ಗಂಗಾವತಿಯ ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಬಾರ್ ಅಸೋಸಿಯೇಷನ್ನ ಎಲ್ಲಾ ಸದಸ್ಯರು ಉಪಸ್ಥಿತರಿರುವರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande