ಹಡಪದ ಅಪ್ಪಣ ಜಯಂತಿ ನಿಮಿತ್ಯ ಪೂರ್ವಸಿದ್ಧತಾ ಸಭೆ
ಗದಗ, 16 ಜುಲೈ (ಹಿ.ಸ.) ಆ್ಯಂಕರ್: ಶ್ರೀ ಹಡಪದ ಅಪ್ಪಣ್ಣನವರ ಜಯಂತಿಯನ್ನು ಜುಲೈ 29 ರಂದು ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ದಲ್ಲಿ ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸ
ಫೋಟೋ


ಗದಗ, 16 ಜುಲೈ (ಹಿ.ಸ.)

ಆ್ಯಂಕರ್: ಶ್ರೀ ಹಡಪದ ಅಪ್ಪಣ್ಣನವರ ಜಯಂತಿಯನ್ನು ಜುಲೈ 29 ರಂದು ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ದಲ್ಲಿ ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಶ್ರೀ ಹಡಪದ ಅಪ್ಪಣ್ಣನವರ ಜಯಂತಿ ನಿಮಿತ್ತ ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ತಾಲೂಕು ಮಟ್ಟದಲ್ಲಿಯೂ ಜಯಂತಿ ಆಚರಣೆಗೆ ಕ್ರಮ ವಹಿಸಬೇಕು. ಶಾಲಾ ಕಾಲೇಜುಗಳಲ್ಲಿ, ಗ್ರಾಮ ಪಂಚಾಯಿತಿಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಶ್ರೀ ಹಡಪದ ಅಪ್ಪಣ್ಣನವರ ಜಯಂತಿ ಆಚರಿಸಲು ಕ್ರಮ ವಹಿಸಬೇಕು. ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಮಾಜದ ಹಿರಿಯರಿಗೆ, ಎಸ್ ಎಸ್ ಎಲ್.ಸಿ. ಹಾಗೂ ಪಿ.ಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ಜಯಂತಿ ದಿನದಂದು ಜರುಗಲಿದೆ. ವಿವಿಧ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಜಯಂತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.

ಶಿಷ್ಟಾಚಾರದನ್ವಯ ಆಮಂತ್ರಣ ಮುದ್ರಣಕ್ಕೆ ಕ್ರಮ ವಹಿಸಬೇಕು. ಒಟ್ಟಾರೆಯಾಗಿ ಶ್ರೀ ಹಡಪದ ಅಪ್ಪಣ್ಣನವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ನಿರ್ದೇಶನ ನೀಡಿದರು.

ಇದೇ ಸಂದರ್ಭದಲ್ಲಿ ಊಟೋಪಹಾರದ ವ್ಯವಸ್ಥೆ, ವೇದಿಕೆ ವ್ಯವಸ್ಥೆ, ಬ್ಯಾನರ್ ಅಳವಡಿಕೆ, ಉಪನ್ಯಾಸಕರ ಆಯ್ಕೆ ಕುರಿತು ಚರ್ಚಿಸಲಾಯಿತು ಮತ್ತು ಸಮಾಜದ ಮುಖಂಡರು, ಪದಾಧಿಕಾರಿಗಳು ತಮ್ಮ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ.ಮಸನಾಯಕ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಎಂ.ಎಂ.ತುಂಬರಮಟ್ಟಿ, ಸಮಾಜದ ಹಿರಿಯ ಮುಖಂಡರು, ಗಣ್ಯರು , ಪದಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಸವರಾಜ. ವ್ಹಿ. ಬಳ್ಳಾರಿ ಸರ್ವರಿಗೂ ಸ್ವಾಗತಿಸಿ ವಂದಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande