ನಜ್ಞಾನಯೋಗಿ ಸಿದ್ದೇಶ್ವರ ವೃಕ್ಷೋದ್ಯಾನ ಹಸಿರು ಕ್ರಾಂತಿಯ ಹೆಗ್ಗುರುತು: ಶಾಸಕ ಯಶವಂತರಾಯಗೌಡ
ವಿಜಯಪುರ, 16 ಜುಲೈ (ಹಿ.ಸ.) ಆ್ಯಂಕರ್ : ನಿಸರ್ಗದಲ್ಲಿ ದೇವರನ್ನು ಕಾಣಬೇಕು ಎಂಬುದು ಸದಾ ಹಸನ್ಮುಖಿ, ಜ್ಞಾನದ ಬೆಳಕಾಗಿ ಸಮಾಜವನ್ನು ಮುನ್ನಡೆಸಿದ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿಗಳು ಜಗತ್ತಿಗೆ ನೀಡಿದ ಅಮೂಲ್ಯ ಸಂದೇಶವಾಗಿದೆ. ಆ ದಿವ್ಯ ಸಂದೇಶವನ್ನು ಜೀವನದ ಆದರ್ಶವನ್ನಾಗಿ ಮಾಡಿಕೊಂಡು,
ಜೀಪ್ಲೈನ್


ವಿಜಯಪುರ, 16 ಜುಲೈ (ಹಿ.ಸ.)

ಆ್ಯಂಕರ್ : ನಿಸರ್ಗದಲ್ಲಿ ದೇವರನ್ನು ಕಾಣಬೇಕು ಎಂಬುದು ಸದಾ ಹಸನ್ಮುಖಿ, ಜ್ಞಾನದ ಬೆಳಕಾಗಿ ಸಮಾಜವನ್ನು ಮುನ್ನಡೆಸಿದ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿಗಳು ಜಗತ್ತಿಗೆ ನೀಡಿದ ಅಮೂಲ್ಯ ಸಂದೇಶವಾಗಿದೆ. ಆ ದಿವ್ಯ ಸಂದೇಶವನ್ನು ಜೀವನದ ಆದರ್ಶವನ್ನಾಗಿ ಮಾಡಿಕೊಂಡು, ಅವರ ತತ್ವಗಳನ್ನು ಕಾರ್ಯರೂಪಕ್ಕೆ ತಂದ ಪರಿಣಾಮವೇ ಇಂದು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸಾವಳಸಂಗ ಗ್ರಾಮದ ಬಳಿ ನಿರ್ಮಾಣಗೊಂಡಿರುವ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಒಂದು ಕಾಲದಲ್ಲಿ ತೀವ್ರ ಬರಪೀಡಿತ ಪ್ರದೇಶವೆಂದು ಗುರುತಿಸಿಕೊಂಡಿದ್ದ ಈ ಭಾಗದಲ್ಲಿ ಇಂದು ಸಾವಿರಾರು ಮರಗಳು ಬೆಳೆದು ಮಲೆನಾಡಿನ ಹಸಿರು ಸೊಬಗನ್ನೇ ನೆನಪಿಸುವಂತಹ ಪರಿಸರ ನಿರ್ಮಾಣವಾಗಿದೆ. ಕಣ್ಣು ಹಾಯಿಸಿದ ಕಡೆಯಲ್ಲೆಲ್ಲ ಹಸಿರಿನ ಹೊದಿಕೆ ಹರಡಿಕೊಂಡಿರುವ ಈ ವೃಕ್ಷೋದ್ಯಾನವು ಪ್ರಕೃತಿ ಪ್ರಿಯರು, ಪರಿಸರಾಸಕ್ತರು ಹಾಗೂ ಪ್ರವಾಸಿಗರನ್ನು ತನ್ನತ್ತ ಸೆಳೆಯುವ ಪ್ರಮುಖ ತಾಣವಾಗಿ ರೂಪುಗೊಂಡಿದೆ ಎಂದು ಹೇಳಿದರು.

ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿಗಳ ಪರಿಸರ ಪ್ರೇಮ, ಪ್ರಕೃತಿಯ ಬಗ್ಗೆ ಅವರಿಗಿದ್ದ ಕಾಳಜಿ ಹಾಗೂ ನಿಸರ್ಗವೇ ದೇವರು ಎಂಬ ಸಂದೇಶವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಅಭಿವೃದ್ಧಿಪಡಿಸಲಾಗಿದೆ. ಹಸಿರು ಪರಿಸರ ನಿರ್ಮಾಣದ ಜೊತೆಗೆ ಜೀವ ವೈವಿಧ್ಯ ಸಂರಕ್ಷಣೆ, ಪರಿಸರ ಜಾಗೃತಿ ಮತ್ತು ಗ್ರಾಮೀಣ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ವೃಕ್ಷೋದ್ಯಾನ ಮಾದರಿಯಾಗಿ ಹೊರಹೊಮ್ಮಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲೇ ಅತ್ಯುತ್ತಮ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸುವುದಾಗಿ ಸಾರ್ವಜನಿಕರಿಗೆ ನೀಡಿದ್ದ ಭರವಸೆಯನ್ನು ಹಂತ ಹಂತವಾಗಿ ಈಡೇರಿಸಲಾಗುತ್ತಿದೆ. ಈಗಾಗಲೇ ವೃಕ್ಷೋದ್ಯಾನದಲ್ಲಿ ಪ್ರವಾಸಿಗರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದ್ದು, ಕುಟುಂಬ ಸಮೇತರಾಗಿ ಸಮಯ ಕಳೆಯಲು ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ ಎಂದು ಹೇಳಿದರು.

ಇದಲ್ಲದೆ, ಸಾಹಸ ಕ್ರೀಡೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಜಯಪುರ ಜಿಲ್ಲೆಯಲ್ಲೇ ಪ್ರಪ್ರಥಮ ಪ್ರಯತ್ನವಾಗಿ ಜಿಪ್ಲೈನ್ ವ್ಯವಸ್ಥೆಯನ್ನು ನಿರ್ಮಿಸಲಾಗಿದೆ. ಈ ಸಾಹಸ ಚಟುವಟಿಕೆ ಯುವಜನರು ಹಾಗೂ ಪ್ರವಾಸಿಗರಿಂದ ಉತ್ತಮ ಸ್ಪಂದನೆ ಪಡೆಯುತ್ತಿದ್ದು, ಜಿಲ್ಲೆಯ ಪ್ರವಾಸೋದ್ಯಮಕ್ಕೆ ಹೊಸ ಆಯಾಮ ನೀಡಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಆಕರ್ಷಕ ಸೌಲಭ್ಯಗಳನ್ನು ಕಲ್ಪಿಸಿ ರಾಜ್ಯದ ಪ್ರಮುಖ ಪರಿಸರ ಮತ್ತು ಪ್ರವಾಸಿ ತಾಣವಾಗಿ ವೃಕ್ಷೋದ್ಯಾನವನ್ನು ರೂಪಿಸಲಾಗುವುದು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande