ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ: ಗಡುವಿನೊಳಗೆ ಕಾರ್ಯ ಪೂರ್ಣಗೊಳಿಸಲು ಸಿಇಒ ಸೂಚನೆ
ವಿಜಯಪುರ, 16 ಜುಲೈ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಗುರುವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರ ಅಧ್ಯಕ್ಷತೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳು ಹಾಗೂ ಆಡಳಿತಾತ್ಮಕ ವಿಷಯಗಳ ಕುರಿತು ಸಮಗ್
ಮೀಟಿಂಗ್


ವಿಜಯಪುರ, 16 ಜುಲೈ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಗುರುವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರ ಅಧ್ಯಕ್ಷತೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳು ಹಾಗೂ ಆಡಳಿತಾತ್ಮಕ ವಿಷಯಗಳ ಕುರಿತು ಸಮಗ್ರ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಸಭೆಯಲ್ಲಿ ಗ್ರಾಮ ಪಂಚಾಯತಿಗಳಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು, ಕಲ್ಯಾಣ ಯೋಜನೆಗಳ ಅನುಷ್ಠಾನ, ಆಡಳಿತಾತ್ಮಕ ಕಾರ್ಯವೈಖರಿ ಹಾಗೂ ಸಾರ್ವಜನಿಕ ಸೇವೆಗಳ ಪ್ರಗತಿಯನ್ನು ಅಧಿಕಾರಿಗಳಿಂದ ವಿವರವಾಗಿ ಪರಿಶೀಲಿಸಲಾಯಿತು. ಸರ್ಕಾರದ ಯೋಜನೆಗಳನ್ನು ಜನರಿಗೆ ತ್ವರಿತವಾಗಿ ಹಾಗೂ ಪರಿಣಾಮಕಾರಿಯಾಗಿ ತಲುಪಿಸಲು ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸಿಇಒ ರಿಷಿ ಆನಂದ ಅವರು ಸೂಚಿಸಿದರು.

ಸಭೆಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಇ-ಹಾಜರಾತಿ ಪ್ರಗತಿ, ಗ್ರಾಮ ಪಂಚಾಯತಿಗಳ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಕರ್ತವ್ಯ ಆ್ಯಪ್ನಲ್ಲಿ ನೋಂದಾಯಿಸುವ ಕಾರ್ಯ, ಗ್ರಂಥಾಲಯ ಕರ ಪಾವತಿ, ಕರ ವಸೂಲಾತಿ, ಇ-ಸ್ವತ್ತು, ಐಪಿಜಿಆರ್ಎಸ್, ಸಕಾಲ ಅರ್ಜಿಗಳ ವಿಲೇವಾರಿ, ಹಕ್ಕು ಪತ್ರಗಳ ವಿತರಣೆ, 11ಎ ಮತ್ತು 11ಬಿ ಪ್ರಕರಣಗಳು, ವಿಚಾರಣಾ ವರದಿ ಸಲ್ಲಿಕೆ ಹಾಗೂ ನ್ಯಾಯಾಲಯ ಪ್ರಕರಣಗಳ ಸ್ಥಿತಿ ಕುರಿತು ಸವಿವರವಾಗಿ ಚರ್ಚಿಸಲಾಯಿತು.

ಇದಲ್ಲದೆ ಗ್ರಾಮ ಪಂಚಾಯತ್ ಸಿಬ್ಬಂದಿಯನ್ನು ಆರೋಗ್ಯ ಸಂಜೀವಿನಿ ಯೋಜನೆಯಡಿ ನೋಂದಾಯಿಸುವಿಕೆ, ವಾಸಸ್ಥಳ ದೃಢೀಕರಣ, ವಿವಿಧ ವಸತಿ ಯೋಜನೆಗಳ ಅನುಷ್ಠಾನ, ಗ್ರಾಮ ಪಂಚಾಯತ್ ಅಭಿವೃದ್ಧಿ ಯೋಜನೆ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ನಿರ್ದೇಶನ ನೀಡಲಾಯಿತು.

ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳನ್ನು ಮುಂಚಿತವಾಗಿ ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಸಿಇಒ, ಎಫ್ಟಿಕೆ ಕಿಟ್ಗಳ ಮೂಲಕ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಗಳನ್ನು ವೇಗಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆಯಡಿ ವೈಯಕ್ತಿಕ ಹಾಗೂ ಸಮುದಾಯ ಶೌಚಾಲಯಗಳ ನಿರ್ಮಾಣ, ವೈಯಕ್ತಿಕ ಶೌಚಾಲಯಗಳ ಅನುದಾನ ಪಾವತಿ, ಓಡಿಎಫ್ ಪ್ಲಸ್ ಘೋಷಣೆ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕಗಳು, ಘನತ್ಯಾಜ್ಯ ನಿರ್ವಹಣಾ ಘಟಕಗಳ ಕಾರ್ಯನಿರ್ವಹಣೆ ಹಾಗೂ ಲೆಕ್ಕ ಶಾಖೆಯ ವಿವಿಧ ವಿಷಯಗಳ ಪ್ರಗತಿಯನ್ನೂ ಪರಿಶೀಲಿಸಲಾಯಿತು.

ಅದೇ ರೀತಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಜಿಎನ್ಆರ್ಇಜಿಎ) ಅಡಿಯಲ್ಲಿ ಯೋಜನೆ ಕುರಿತು ಜಾಗೃತಿ ಮೂಡಿಸುವುದು, ಮಾನವ ದಿನಗಳ ಸೃಜನೆ, ಇ-ಕೆವೈಸಿ ಪ್ರಗತಿ, ಸಾಮಗ್ರಿ ಮೊತ್ತ ಪಾವತಿ, ಕಾಮಗಾರಿಗಳ ಜಿಯೋ-ಟ್ಯಾಗಿಂಗ್, ಸಾಮಾಜಿಕ ಪರಿಶೋಧನೆ, ಒಂಬುಡ್ಸ್ಮನ್, ಎಸ್ಕ್ಯೂಎಂ ವಸೂಲಾತಿ, ಕಾಮಗಾರಿಗಳ ಪೂರ್ಣಗೊಳಿಸುವಿಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಲಾಯಿತು.

ಸಭೆಯಲ್ಲಿ ಮಾತನಾಡಿದ ಸಿಇಒ ರಿಷಿ ಆನಂದ ಅವರು, ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಗಡುವಿನೊಳಗೆ ಪೂರ್ಣಗೊಳಿಸುವುದರ ಜೊತೆಗೆ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸೇವೆಗಳನ್ನು ಒದಗಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಬಾಕಿ ಉಳಿದಿರುವ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಯೋಜನೆಗಳ ಅನುಷ್ಠಾನದಲ್ಲಿ ಗುಣಮಟ್ಟ ಹಾಗೂ ಪಾರದರ್ಶಕತೆಗೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಪ್ರಕಾಶ ವಡ್ಡರ, ಮುಖ್ಯ ಯೋಜನಾಧಿಕಾರಿ ಸಿ. ಬಿ. ಕುಂಬಾರ, ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಯೋಜನಾ ನಿರ್ದೇಶಕ ಅಶೋಕ ಕಲಘಟಗಿ, ಜಿಲ್ಲಾ ಪಂಚಾಯತ್ನ ವಿವಿಧ ಶಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande