ರಾಜ್ಯದಲ್ಲಿ ದುರ್ಬಲ ಮುಂಗಾರು ಮುಂದುವರಿಕೆ
ಬೆಂಗಳೂರು, 16 ಜುಲೈ (ಹಿ.ಸ.): ಆ್ಯಂಕರ್: ರಾಜ್ಯದಲ್ಲಿ ದುರ್ಬಲ ಮುಂಗಾರು ಮುಂದುವರಿಯಲಿದ್ದು, ಬಹುತೇಕ ಪ್ರದೇಶಗಳಲ್ಲಿ ಗರಿಷ್ಠ ಉಷ್ಣಾಂಶ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡು
ರಾಜ್ಯದಲ್ಲಿ ದುರ್ಬಲ ಮುಂಗಾರು ಮುಂದುವರಿಕೆ


ಬೆಂಗಳೂರು, 16 ಜುಲೈ (ಹಿ.ಸ.):

ಆ್ಯಂಕರ್:

ರಾಜ್ಯದಲ್ಲಿ ದುರ್ಬಲ ಮುಂಗಾರು ಮುಂದುವರಿಯಲಿದ್ದು, ಬಹುತೇಕ ಪ್ರದೇಶಗಳಲ್ಲಿ ಗರಿಷ್ಠ ಉಷ್ಣಾಂಶ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮುನ್ಸೂಚನೆ ನೀಡಿದೆ.

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಕೆಲವೆಡೆ ಬಲವಾದ ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಒಳನಾಡು ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದ ಜೊತೆಗೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande