ಗ್ಯಾರೆಂಟಿ ಯೋಜನೆಗಳ ಸೌಲಭ್ಯ ಅರ್ಹರಿಗೆ ತಲುಪಲಿ: ಎಚ್.ಎಂ. ರೇವಣ್ಣ
ಗದಗ, 17 ಜುಲೈ (ಹಿ.ಸ.): ಆ್ಯಂಕರ್: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ''ಗೃಹಲಕ್ಷ್ಮಿ'' ಮತ್ತು ''ಗೃಹಜ್ಯೋತಿ'' ಯೋಜನೆಗಳ ಅನುಷ್ಠಾನವು ಯಾವುದೇ ಲೋಪದೋಷಗಳಿಲ್ಲದೆ ಅತ್ಯಂತ ಪಾರದರ್ಶಕವಾಗಿ ಅರ್ಹ ಫಲಾನುಭವಿಗಳಿಗೆ ತಲುಪಬೇಕು ಎಂದು ಕರ್ನಾಟಕ ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್
ಫೋಟೋ


ಗದಗ, 17 ಜುಲೈ (ಹಿ.ಸ.):

ಆ್ಯಂಕರ್: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ 'ಗೃಹಲಕ್ಷ್ಮಿ' ಮತ್ತು 'ಗೃಹಜ್ಯೋತಿ' ಯೋಜನೆಗಳ ಅನುಷ್ಠಾನವು ಯಾವುದೇ ಲೋಪದೋಷಗಳಿಲ್ಲದೆ ಅತ್ಯಂತ ಪಾರದರ್ಶಕವಾಗಿ ಅರ್ಹ ಫಲಾನುಭವಿಗಳಿಗೆ ತಲುಪಬೇಕು ಎಂದು ಕರ್ನಾಟಕ ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಂ. ರೇವಣ್ಣ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗದಗ ನಗರದ ಜಿಲ್ಲಾಡಳಿತ ಭವನದ ಕೇಸ್ವಾನ ಕಾನ್ಫರೆನ್ಸ್ ಹಾಲ್ ನಲ್ಲಿಂದು ಜರುಗಿದ ವಿಡಿಯೋ ಸಂವಾದದಲ್ಲಿ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗೃಹಲಕ್ಷ್ಮಿ ಯೋಜನೆಯಡಿ ಮರಣ ಹೊಂದಿದ ಫಲಾನುಭವಿಗಳ ಬ್ಯಾಂಕ್ ಖಾತೆಗಳ ತಡೆ ಮತ್ತು ದುರುಪಯೋಗ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್. ಎಮ್. ರೇವಣ್ಣ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಪ್ಪು ಮಾಹಿತಿ ನೀಡಿ ಗ್ಯಾರೆಂಟಿ ಯೋಜನೆಗಳ ಲಾಭ ಪಡೆದಿರುವವರಿಂದ ನಿಯಮಾನುಸಾರ ಹಣವನ್ನು ಹಿಂಪಡೆಯಲು ಮತ್ತು ಈ ಪ್ರಕ್ರಿಯೆಯನ್ನು ಎರಡು ವಾರಗಳೊಳಗೆ ಪೂರ್ಣಗೊಳಿಸಲು ನಿರ್ದೇಶನ ನೀಡಿದರು.

ಗೃಹಜ್ಯೋತಿ ಯೋಜನೆಯಡಿ ಇನ್ನು ಜಾರಿಗೆ ಬಾರದೇ ಬಾಕಿ ಉಳಿದಿರುವ ಗ್ರಾಹಕರ ನೋಂದಣಿ ಪ್ರಕ್ರಿಯೆಯನ್ನು ಚುರುಕುಗೊಳಿಸಲು ವಿದ್ಯುತ್ ಸರಬರಾಜು ಕಂಪನಿಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಗ್ರಾಮೀಣ ಭಾಗದಲ್ಲಿ ಈ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಲು ತಿಳಿಸಿದರು.

ಗ್ಯಾರೆಂಟಿ ಯೋಜನೆಗಳ ಯಶಸ್ಸಿನ ಸಂಕೇತವಾಗಿ ಮತ್ತು ಪರಿಸರ ಸಂರಕ್ಷಣೆಯ ಮಹತ್ವ ಸಾರಲು ಪ್ರತಿಯೊಂದು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಫಲಾನುಭವಿಗಳ ಮೂಲಕ ಕನಿಷ್ಠ ಒಂದು ಬೇವಿನ ಅಥವಾ ಆಲದ ಮರವನ್ನು ನೆಡುವ ವಿಶಿಷ್ಟ ಅಭಿಯಾನವನ್ನು ಹಮ್ಮಿಕೊಂಡು ಪರಿಸರ ಜಾಗೃತಿ ಮೂಡಿಸಲು ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸೂಚಿಸಿದರು.

ನಮ್ಮ ಸರ್ಕಾರದ ಗ್ಯಾರೆಂಟಿ ಯೋಜನೆಗಳು ಬಡವರ ಮತ್ತು ಮಧ್ಯಮ ವರ್ಗದವರ ಬದುಕಿಗೆ ಆಸರೆಯಾಗಿವೆ. ಯಾವುದೇ ಕಾರಣಕ್ಕೂ ಅನರ್ಹರು ಇದರ ದುರುಪಯೋಗ ಪಡೆದುಕೊಳ್ಳಲು ಅವಕಾಶ ನೀಡಬಾರದು. ಅಧಿಕಾರಿಗಳು ಕ್ಷೇತ್ರ ಮಟ್ಟದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿ ಯೋಜನೆಗಳ ಯಶಸ್ಸಿಗೆ ಶ್ರಮಿಸಬೇಕು ಎಂದು ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷಎಚ್.ಎಂ. ರೇವಣ್ಣ ತಿಳಿಸಿದರು.

ರಾಜ್ಯ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್. ಪಾಟೀಲ್( ಬ್ಯಾಡಗಿ ) ಮಾತನಾಡಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಸಾವಿನ ಪ್ರಕರಣಗಳ ಸಂಖ್ಯೆ, ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸ್ವೀಕಾರದ ಮೂಲಕ ಚಾಲನೆ ನೀಡಿ ಜುಲೈ 19ಕ್ಕೆ ಮೂರು ವರ್ಷ ತುಂಬುವ ಹಿನ್ನೆಲೆಯಲ್ಲಿ ಪಂಚಾಯತಿ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸುವ ಬಗ್ಗೆ, ರಾಜ್ಯದ ಯೋಜನೆಯ ಫಲಾನುಭವಿಗಳ ಹೆಚ್ಚುವರಿ ಮಾಹಿತಿಯನ್ನು ಪಡೆಯಲು ಎಸ್ಕಾಂ ಸಿಬ್ಬಂದಿಗಳು ಗ್ಯಾರಂಟಿ ಸಮಿತಿಗಳು ಸದಸ್ಯರ ಸಹಕಾರದ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಚರ್ಚಿಸಲಾಯಿತು.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ 'ಗೃಹಲಕ್ಷ್ಮಿ' ಯೋಜನೆಯಡಿ ಗದಗ ಜಿಲ್ಲೆಯಲ್ಲಿ ಮಾರ್ಚ್-2026ರವರೆಗಿನ ವರದಿಯ ಅನ್ವಯ, ಇದುವರೆಗೆ ಒಟ್ಟು 5,650 ಗೃಹಲಕ್ಷ್ಮಿ ಫಲಾನುಭವಿಗಳು ಮರಣ ಹೊಂದಿರುವುದು ಪತ್ತೆಯಾಗಿದೆ. ಮರಣ ಹೊಂದಿದವರ ಪೈಕಿ ಒಟ್ಟು 2,207 ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ತಲುಪಿದೆ. ಫಲಾನುಭವಿಗಳು ಮರಣ ಹೊಂದಿದ ನಂತರವೂ ಅವರ ಖಾತೆಗಳಿಗೆ ಒಟ್ಟು 11,978 ಕಂತುಗಳ ಹಣವನ್ನು ಜಮೆಯಾಗಿದೆ. ಮರಣದ ನಂತರ ಜಿಲ್ಲೆಯ ಈ ಖಾತೆಗಳಿಗೆ ಒಟ್ಟು ₹2,39,56,000 ರೂ.ಗಳು ವರ್ಗಾವಣೆಯಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ವದಗಿಸಿದರು.

ಈ ಸಭೆಯಲ್ಲಿ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ್ ಮಂದಾಲಿ, ಮುಂಡರಗಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಡಿ.ಡಿ. ಮೊರಾನಾಳ,ಗ್ಯಾರಂಟಿ ಸಮಿತಿ ಸದಸ್ಯ ಕೃಷ್ಣಗೌಡ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಶ್ರೀಮತಿ ರಾಧಾ ಮಣ್ಣೂರ,ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಶ್ರೀಮತಿ ಹುಲಿಗೆಮ್ಮ ಜೋಗೇರ, ಹೆಸ್ಕಾಂ ಅಧಿಕ್ಷಕ ಇಂಜಿನಿಯರ ಶ್ರೀಮತಿ ನಜ್ಮನ್ನಿಸ್. ಕೆ ಹಾಜರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande