ಡಿಸೆಂಬರ್ 31ರೊಳಗೆ ಜಿಬಿಎ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ, 17 ಜುಲೈ (ಹಿ.ಸ.): ಆ್ಯಂಕರ್: ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಡಿಸೆಂಬರ್ 31ರೊಳಗೆ ನಡೆಸಿ ಪೂರ್ಣಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಶುಕ್ರವಾರ ನಿರ್ದೇಶನ ನೀಡಿದೆ. ಕರ್ನಾಟಕದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ
SC file photo


ನವದೆಹಲಿ, 17 ಜುಲೈ (ಹಿ.ಸ.):

ಆ್ಯಂಕರ್:

ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಡಿಸೆಂಬರ್ 31ರೊಳಗೆ ನಡೆಸಿ ಪೂರ್ಣಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಶುಕ್ರವಾರ ನಿರ್ದೇಶನ ನೀಡಿದೆ.

ಕರ್ನಾಟಕದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನವೆಂಬರ್ ವೇಳೆಗೆ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ, ಆಗಸ್ಟ್ 31ರೊಳಗೆ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಮನವಿ ಸಲ್ಲಿಸಿತ್ತು. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಸರ್ಕಾರದ ಮನವಿಯನ್ನು ಪರಿಗಣಿಸಿ ಚುನಾವಣೆಗೆ ಡಿಸೆಂಬರ್ 31ರವರೆಗೆ ಕಾಲಾವಕಾಶ ನೀಡಿತು.

ಆದರೆ, ಡಿಸೆಂಬರ್‌ನಲ್ಲಿ ಮತ್ತೊಂದು ಕಾರಣ ನೀಡಿ ಚುನಾವಣೆ ಮುಂದೂಡಲು ಮನವಿ ಮಾಡಬಾರದು ಎಂದು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

ವಿಚಾರಣೆ ವೇಳೆ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್, ಮುಂದಿನ ದಿನಗಳಲ್ಲಿ ಮತ್ತೆ ಚುನಾವಣೆ ಮುಂದೂಡುವ ಮನವಿ ಮಾಡುವ ಪರಿಸ್ಥಿತಿ ಬಂದರೆ ಸರ್ಕಾರದ ಪರ ತಾವು ಹಾಜರಾಗುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ಹಿಂದೆ ಸುಪ್ರೀಂ ಕೋರ್ಟ್ ಆಗಸ್ಟ್ 31ರೊಳಗೆ ಚುನಾವಣೆ ನಡೆಸುವಂತೆ ಗಡುವು ನೀಡಿತ್ತು. ಇದೀಗ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಪರಿಗಣಿಸಿ ಆ ಗಡುವನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande