ಜಯಮಂಗಲ ಗ್ರಾಮದಲ್ಲಿ ಕಾಮಗಾರಿಗಳ ಅನುಷ್ಠಾನದಲ್ಲಿ ಅಕ್ರಮದ ಆರೋಪ
ಜಯಮಂಗಲ ಗ್ರಾಮದಲ್ಲಿ ಕಾಮಗಾರಿಗಳ ಅನುಷ್ಠಾನದಲ್ಲಿ ಅಕ್ರಮದ ಆರೋಪ
ಕೆ.ಗೌತಮ್


ಕೋಲಾರ, ಜುಲೈ ೧೭ (ಹಿ.ಸ):

ಆ್ಯಂಕರ್ : ಮಾಲೂರು ತಾಲ್ಲೂಕಿನ ಜಯಮಂಲ ಗ್ರಾಮದಲ್ಲಿ ಕೈಗೊಂಡಿರುವ ತಾಲ್ಲೂಕು ಆಡಳಿತ ಮತ್ತು ಶಾಸಕರ ನಿಧಿಯ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಗ್ರಾಮದ ನಿವಾಸಿ ಗೌತಮ್ ಕೆ. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ದೂರು ನೀಡಿದ್ದಾರೆ.

ಜಯಮಂಗಲ ಗ್ರಾಮದಲ್ಲಿ ಸಾರ್ವಜನಿಕ ಆಟದ ಮೈದಾನದ ಸ್ವಚ್ಛತೆ, ಗೇಟ್ ಅಳವಡಿಕೆ, ರಾಜಕಾಲುವೆ ಸ್ವಚ್ಛತೆ ಮಾಡುವಂತೆ ಹಲವಾರು ಅರ್ಜಿಗಳನ್ನು ನೀಡಿದರೂ ಸಹ ಇದುವರೆಗೂ ಕಾಲುವೆಗಳನ್ನು ಸ್ವಚಗೊಳಿಸುವಲ್ಲಿ ಗ್ರಾಮ ಪಂಚಾಯಿತಿ ಆಡಳಿತ ವಿಫಲಗೊಂಡಿದೆ ಎಂದು ತಿಳಿಸಿದ್ದಾರೆ.

ಜಯಮಂಗಲ ಗ್ರಾಮದಲ್ಲಿ ಶಾಸಕರ ನಡಿಗೆ ಗ್ರಾಮದ ಕಡೆ ಎಂಬ ಕಾರ್ಯಕ್ರಮದಲ್ಲಿ ದೂರು ನೀಡಿದ್ದರೂ ಯಾವುದೇ ಕ್ರಮ ವಹಿಸಿರುವುದಿಲ್ಲ ಎಂದು ಆರೋಪಿಸಿದ್ದಾರೆ.

ಕಾಮಗಾರಿಗಳ ಕುರಿತು ಮಾಹಿತಿ ನೀಡುವಂತೆ ಮತ್ತು ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಿದರೂ, ಈವರೆಗೂ ಯಾವುದೇ ಮಾಹಿತಿ ನೀಡಿಲ್ಲ ಎಂದು ದೂರುದಾರರು ತಿಳಿಸಿದ್ದಾರೆ. ಕೂಡಲೇ ಈ ವಿಷಯವನ್ನು ಗಮನಿಸಿ, ಸೂಕ್ತ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande