
ಸಿಲಿಗುರಿ, 17 ಜುಲೈ (ಹಿ.ಸ.):
ಆ್ಯಂಕರ್:
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರದಿಂದ ಮೂರು ದಿನಗಳ ಪಶ್ಚಿಮ ಬಂಗಾಳ ಪ್ರವಾಸ ಕೈಗೊಂಡಿದ್ದು, ಜುಲೈ 17ರಿಂದ 19ರವರೆಗೆ ಗಡಿ ಭದ್ರತೆ, ಕಾನೂನು ಸುವ್ಯವಸ್ಥೆ, ಹೊಸ ಅಪರಾಧ ಕಾನೂನುಗಳ ಜಾರಿ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಲಿದ್ದಾರೆ.
ಜುಲೈ 18ರಂದು ಸಿಲಿಗುರಿಯ ಜುಮಾಗಾಚ್ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಗಡಿ ಕಾವಲು ಕೇಂದ್ರಕ್ಕೆ ಭೇಟಿ ನೀಡಿ, ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಯೋಜಿತ ಯೋಧರೊಂದಿಗೆ ಸಂವಾದ ನಡೆಸಲಿದ್ದಾರೆ. ಗಡಿ ಭದ್ರತೆ, ನುಸುಳುವಿಕೆ ತಡೆ, ಕಳ್ಳಸಾಗಣೆ ನಿಯಂತ್ರಣ ಹಾಗೂ ಆಧುನಿಕ ತಂತ್ರಜ್ಞಾನ ಬಳಕೆ ಕುರಿತು ಉನ್ನತ ಮಟ್ಟದ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ.
ಪ್ರವಾಸದ ವೇಳೆ ಗಡಿ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಯೋಜನೆಗಳಿಗೆ ಚಾಲನೆ ಹಾಗೂ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಇತ್ತೀಚೆಗೆ ಜಾರಿಗೆ ಬಂದಿರುವ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮಗಳ ಅನುಷ್ಠಾನ ಕುರಿತೂ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಲಿದ್ದಾರೆ.
ಜುಲೈ 19ರಂದು ಕೊಲ್ಕತ್ತಾದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಉನ್ನತ ಮಟ್ಟದ ಸಭೆ ನಡೆಸಲಿರುವ ಅಮಿತ್ ಶಾ, ಬಳಿಕ ರಾಷ್ಟ್ರೀಯ ಗ್ರಂಥಾಲಯದಲ್ಲಿ ‘ಮ್ಯೂಸಿಯಂ ಆಫ್ ವರ್ಡ್ಸ್’ ಉದ್ಘಾಟನೆ ಹಾಗೂ ವಿಶ್ವ ಬಂಗಾಳ ಸಮಾವೇಶ ಕೇಂದ್ರದಲ್ಲಿ ಅಮೂಲ್ ಡೈರಿ ಘಟಕಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಯೋಜನೆಯು ರಾಜ್ಯದಲ್ಲಿ ಹೈನುಗಾರಿಕೆ ಕ್ಷೇತ್ರದ ಅಭಿವೃದ್ಧಿ, ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡಲಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.