ಸೋನಂ ವಾಂಗ್ಚುಕ್ ಆಸ್ಪತ್ರೆಗೆ:ಕೇಂದ್ರದ ವಿರುದ್ದ ಕಾಂಗ್ರೆಸ್ ಟೀಕೆ
ನವದೆಹಲಿ, 18 ಜುಲೈ (ಹಿ.ಸ.): ಆ್ಯಂಕರ್: ಜಂತರ್-ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ದೆಹಲಿ ಪೊಲೀಸರು ಶನಿವಾರ ಬೆಳಿಗ್ಗೆ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿದ ಕ್ರಮವನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ಈ ಕುರಿತು
ಪವನ ಖೇರಾ


ನವದೆಹಲಿ, 18 ಜುಲೈ (ಹಿ.ಸ.):

ಆ್ಯಂಕರ್:

ಜಂತರ್-ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ದೆಹಲಿ ಪೊಲೀಸರು ಶನಿವಾರ ಬೆಳಿಗ್ಗೆ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿದ ಕ್ರಮವನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ.

ಈ ಕುರಿತು ಎಕ್ಸನಲ್ಲಿ ಹೇಳಿಕೆ ನೀಡಿರುವ ಕಾಂಗ್ರೆಸ್ ಮಾಧ್ಯಮ ವಿಭಾಗದ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಪವನ್ ಖೇರಾ, ಶಾಂತಿಯುತ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕು ಎಂದು ಹೇಳಿದ್ದು, ಈ ಕ್ರಮವು ಮೂಲಭೂತ ಹಕ್ಕುಗಳ ಮೇಲಿನ ಅತಿಕ್ರಮಣವಾಗಿದೆ ಎಂದು ಆರೋಪಿಸಿದ್ದಾರೆ.

ಮತ್ತೊಂದೆಡೆ, ವಾಂಗ್ಚುಕ್ ಅವರ ಆರೋಗ್ಯ ನಿರಂತರವಾಗಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಹಾಗೂ ದೆಹಲಿ ಹೈಕೋರ್ಟ್ ನಿರ್ದೇಶನದಂತೆ ಚಿಕಿತ್ಸೆ ನೀಡಲು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ವಾಂಗ್ಚುಕ್ ಅವರು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಉಪವಾಸದಿಂದ ಅವರ ತೂಕ ಸುಮಾರು 9.5 ಕೆ.ಜಿ. ಇಳಿದಿರುವುದಾಗಿ ವರದಿಯಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande