ಕಾರ್ಮಿಕರ ಕಲ್ಯಾಣ ಮಂಡಳಿಯ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಮನವಿ
ಕಾರ್ಮಿಕರ ಕಲ್ಯಾಣ ಮಂಡಳಿಯ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಮನವಿ
ಕಾರ್ಮಿಕ ಕಲ್ಯಾಣ ಮಂಡಳಿಯಿ0ದ ಕಟ್ಟಡ ಕಾರ್ಮಿಕರಿಗೆ ಸೌಲಭ್ಯವನ್ನು ಐ.ಎನ್.ಟಿ.ಯು.ಸಿ. ರಾಜ್ಯ ಪ್ರಧಾನ ಕಾರ್ಯದರ್ಶಿ ಯಲ್ಲಪ್ಪ ವಿತರಿಸಿದರು.


ಕೋಲಾರ, ೧೮ ಜುಲೈ (ಹಿ.ಸ):

ಆ್ಯಂಕರ್ : ಕಟ್ಟಡ ಕಾರ್ಮಿಕರು ಸರ್ಕಾರದ ಹಾಗೂ ಕಾರ್ಮಿಕರ ಕಲ್ಯಾಣ ಮಂಡಳಿಯಿ0ದ ದೊರೆಯುವ ಹೆರಿಗೆ ಸಹಾಯಧನ, ಮಕ್ಕಳ ಪೋಷಣೆ, ಶಿಕ್ಷಣ, ವೈದ್ಯಕೀಯ ಸೇರಿದಂತೆ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಐಎನ್ಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ ಮನವಿ ಮಾಡಿದರು

ನಗರದ ಕೋರ್ಟ್ ಸರ್ಕಲ್ ಬಳಿಯ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಕಚೇರಿಯಲ್ಲಿ ಕಟ್ಟಡ ನಿರ್ಮಾಣದ ಪಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಸಿ ಮಾತನಾಡಿದ ಅವರು ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿದರೆ ಈ ಸೌಲಭ್ಯಗಳನ್ನು ಪಡೆಯಬಹುದು ಹೆಚ್ಚಿನ ಮಾಹಿತಿಗಾಗಿ ಸಂಘದ ಕಛೇರಿಯಲ್ಲಿ ಮಾಹಿತಿ ಪಡೆಯಬಹುದು ಎಂದರು.ಈ ಸಂದರ್ಭದಲ್ಲಿ ಪಲಾನುಭವಿಗಳು ಸಂಘದ ಪದಾಧಿಕಾರಿಗಳು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande