ಝೂನೋಸಿಸ್ ರೋಗಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ: ಡಾ. ಪರಶುರಾಮ ಎಫ್.ಕೆ
ಧಾರವಾಡ, 18 ಜುಲೈ (ಹಿ.ಸ.): ಆ್ಯಂಕರ್:ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಝೂನೋಸಿಸ್ ಸಾಂಕ್ರಾಮಿಕ ರೋಗಗಳ ಬಗ್ಗೆ ಸಾರ್ವಜನಿಕರು ಜಾಗರೂಕರಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪರಶುರಾಮ ಎಫ್.ಕೆ. ಕರೆ ನೀಡಿದರು. ಜಿಲ್ಲಾಡ
Awareness


ಧಾರವಾಡ, 18 ಜುಲೈ (ಹಿ.ಸ.):

ಆ್ಯಂಕರ್:ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಝೂನೋಸಿಸ್ ಸಾಂಕ್ರಾಮಿಕ ರೋಗಗಳ ಬಗ್ಗೆ ಸಾರ್ವಜನಿಕರು ಜಾಗರೂಕರಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪರಶುರಾಮ ಎಫ್.ಕೆ. ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪಶುಪಾಲನಾ ಇಲಾಖೆಯ ಸಹಯೋಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ವಿಶ್ವ ಝೂನೋಸಿಸ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ವರ್ಷದ ಧ್ಯೇಯವಾಕ್ಯ ಒಂದು ಜಗತ್ತು, ಒಂದು ಆರೋಗ್ಯ–ಝೂನೋಸಿಸ್ ತಡೆಗಟ್ಟುವಿಕೆ ಆಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಮಾನವರಲ್ಲಿ ಕಂಡುಬರುವ ಶೇ.60ಕ್ಕೂ ಹೆಚ್ಚು ಸಾಂಕ್ರಾಮಿಕ ರೋಗಗಳು ಪ್ರಾಣಿ ಮೂಲದ್ದಾಗಿದ್ದು, ರೇಬಿಸ್, ಡೆಂಗ್ಯೂ, ಮಂಗನ ಕಾಯಿಲೆ ಹಾಗೂ ಕೋವಿಡ್-19 ಪ್ರಮುಖ ಝೂನೋಟಿಕ್ ಕಾಯಿಲೆಗಳಾಗಿವೆ ಎಂದು ತಿಳಿಸಿದರು.

ಸಾಕು ಪ್ರಾಣಿಗಳಿಗೆ ನಿಯಮಿತ ಲಸಿಕೆ ಹಾಕಿಸುವುದು, ಪ್ರಾಣಿಗಳನ್ನು ಮುಟ್ಟಿದ ಬಳಿಕ ಕೈಗಳನ್ನು ಚೆನ್ನಾಗಿ ತೊಳೆಯುವುದು ಹಾಗೂ ಆರೋಗ್ಯ ಇಲಾಖೆಯ ಸೂಚನೆಗಳನ್ನು ಪಾಲಿಸುವ ಮೂಲಕ ಈ ರೋಗಗಳನ್ನು ತಡೆಗಟ್ಟಬಹುದು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮಹೇಶ್ ಎನ್. ಚಿತ್ತರಗಿ, ಎಸ್‌ಡಿಎಂ ವೈದ್ಯಕೀಯ ಕಾಲೇಜಿನ ಡಾ. ರಾಕೇಶ್ ಕೆ. ನಾಯಕ, ಸಾರ್ವಜನಿಕ ಪಶುವೈದ್ಯಕೀಯ ಕಾಲೇಜಿನ ಡಾ. ಸಂತೋಷ ಸಜ್ಜನ ಸೇರಿದಂತೆ ಆರೋಗ್ಯ ಮತ್ತು ಪಶುಪಾಲನಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande