ಬಡವರ ಆರೋಗ್ಯ ರಕ್ಷಣೆಗೆ ಶಿಬಿರಗಳು ಜೀವನಾಡಿ:ಗಂಗಾಧರ ಸಂಬಣ್ಣಿ
ವಿಜಯಪುರ, 18 ಜುಲೈ (ಹಿ.ಸ.) ಆ್ಯಂಕರ್ : ವಿಜಯಪುರದ ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಸಾರವಾಡ ಗ್ರಾಮದಲ್ಲಿ ಆಯೋಜಿಸಲಾದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ವಿಡಿಎ ಅಧ್ಯಕ್ಷ ಗಂಗಾಧರ ಸಂಬಣ್ಣಿ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿ
ಉಚಿತ


ವಿಜಯಪುರ, 18 ಜುಲೈ (ಹಿ.ಸ.)

ಆ್ಯಂಕರ್ : ವಿಜಯಪುರದ ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಸಾರವಾಡ ಗ್ರಾಮದಲ್ಲಿ ಆಯೋಜಿಸಲಾದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ವಿಡಿಎ ಅಧ್ಯಕ್ಷ ಗಂಗಾಧರ ಸಂಬಣ್ಣಿ ಚಾಲನೆ ನೀಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಬಡವರು ಹಾಗೂ ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಭಾಗ್ಯ ಕಲ್ಪಿಸುವ ಜೀವನಾಡಿಯಾಗಿವೆ ಎಂದು ಹೇಳಿದರು. ಇಂತಹ ಶಿಬಿರಗಳ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಗುಣಮಟ್ಟದ ವೈದ್ಯಕೀಯ ಸೇವೆ ತಲುಪುವುದರ ಜೊತೆಗೆ ಅನೇಕ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ. ಇದರಿಂದ ಅನೇಕ ಅಮೂಲ್ಯ ಜೀವಗಳನ್ನು ರಕ್ಷಿಸಬಹುದಾಗಿದೆ ಎಂದು ತಿಳಿಸಿದರು.

ದೂರದ ನಗರಗಳಿಗೆ ತೆರಳಿ ಚಿಕಿತ್ಸೆ ಪಡೆಯಲು ಸಾಧ್ಯವಾಗದ ಗ್ರಾಮೀಣ ಜನರಿಗೆ ಇಂತಹ ಉಚಿತ ಶಿಬಿರಗಳು ಸಂಜೀವಿನಿಯಂತೆ ಕಾರ್ಯನಿರ್ವಹಿಸುತ್ತವೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಯಾವುದೇ ಹಣದ ಹೊರೆಯಿಲ್ಲದೆ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಸಲಹೆ ದೊರೆಯುವುದು ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ಹೇಳಿದರು.

ಗ್ರಾಮಸ್ಥರು ಆರೋಗ್ಯವನ್ನು ನಿರ್ಲಕ್ಷಿಸದೆ ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು. ಆರಂಭದಲ್ಲೇ ಕಾಯಿಲೆಗಳನ್ನು ಪತ್ತೆ ಹಚ್ಚುವುದರಿಂದ ಉತ್ತಮ ಆರೋಗ್ಯದೊಂದಿಗೆ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಗಂಗಾಧರ ಸಂಬಣ್ಣಿ ಕರೆ ನೀಡಿದರು.

ಶಿಬಿರದಲ್ಲಿ ವಿವಿಧ ವಿಭಾಗಗಳ ವೈದ್ಯರು ಸಾರ್ವಜನಿಕರ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ವೈದ್ಯಕೀಯ ಸಲಹೆ ಹಾಗೂ ಚಿಕಿತ್ಸಾ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಸದಾಶಿವ ಚಿಕ್ಕರೆಡ್ಡಿ, ಗ್ರಾಮದ ಹಿರಿಯರು, ಗ್ರಾಮಸ್ಥರು ಹಾಗೂ ಆರೋಗ್ಯ ಸಿಬ್ಬಂದಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande