ಗುಟ್ಟಿ ಬಸವಣ್ಣ ಏತ ನೀರಾವರಿ ಯೋಜನೆಗೆ ವೇಗ ನೀಡಿದ ನಾಯಕತ್ವ
ವಿಜಯಪುರ, 18 ಜುಲೈ (ಹಿ.ಸ.) ಆ್ಯಂಕರ್ : ಮಾತಲ್ಲ... ಕೆಲಸದಲ್ಲಿ ಸಾಬೀತು ಎಂಬ ಧ್ಯೇಯದೊಂದಿಗೆ ರೈತರ ಅಭಿವೃದ್ಧಿಗೆ ಆದ್ಯತೆ ನೀಡಿದ ನಾಯಕತ್ವದ ಉದಾಹರಣೆಯಾಗಿ 2022ರ ಆಗಸ್ಟ್ 29ರಂದು ಗುಟ್ಟಿ ಬಸವಣ್ಣ ಏತ ನೀರಾವರಿ ಯೋಜನೆಗೆ ಅಂದಿನ ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿದ್ದ ದಿವಂಗತ ಉಮೇಶ
ನೀರು


ವಿಜಯಪುರ, 18 ಜುಲೈ (ಹಿ.ಸ.)

ಆ್ಯಂಕರ್ : ಮಾತಲ್ಲ... ಕೆಲಸದಲ್ಲಿ ಸಾಬೀತು ಎಂಬ ಧ್ಯೇಯದೊಂದಿಗೆ ರೈತರ ಅಭಿವೃದ್ಧಿಗೆ ಆದ್ಯತೆ ನೀಡಿದ ನಾಯಕತ್ವದ ಉದಾಹರಣೆಯಾಗಿ 2022ರ ಆಗಸ್ಟ್ 29ರಂದು ಗುಟ್ಟಿ ಬಸವಣ್ಣ ಏತ ನೀರಾವರಿ ಯೋಜನೆಗೆ ಅಂದಿನ ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿದ್ದ ದಿವಂಗತ ಉಮೇಶ್ ಕತ್ತಿ ಹಾಗೂ ಮಾಜಿ ಶಾಸಕ ರಮೇಶ ಭೂಸನೂರ ಅವರು ಭೇಟಿ ನೀಡಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದ್ದನ್ನು ಸ್ಮರಿಸಲಾಗುತ್ತಿದೆ ಎಂದು ಸಿಂದಗಿ ಮಾಜಿ ಶಾಸಕ ರಮೇಶ್ ಬಸನೂರು ಹೇಳಿದರು.

ಸಿಂದಗಿ ವಿಧಾನಸಭಾ ಕ್ಷೇತ್ರದ ರೈತರ ಬಹುದಿನಗಳ ಕನಸಾಗಿರುವ ಗುಟ್ಟಿ ಬಸವಣ್ಣ ಏತ ನೀರಾವರಿ ಯೋಜನೆ ಶೀಘ್ರ ಪೂರ್ಣಗೊಂಡು ರೈತರ ಜಮೀನುಗಳಿಗೆ ನೀರು ತಲುಪಬೇಕು ಎಂಬ ಉದ್ದೇಶದಿಂದ ಅಂದಿನ ಸಚಿವ ಉಮೇಶ್ ಕತ್ತಿ ಅವರು ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಸಭೆ ನಡೆಸಿ ಕಾಮಗಾರಿಯ ಪ್ರಗತಿ, ಮೋಟಾರ್ಗಳ ಅಳವಡಿಕೆ ಹಾಗೂ ತಾಂತ್ರಿಕ ವ್ಯವಸ್ಥೆಗಳ ಕುರಿತು ಸಮಗ್ರ ಮಾಹಿತಿ ಪಡೆದಿದ್ದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ರಮೇಶ ಭೂಸನೂರ ಅವರು ಯೋಜನೆಯ ಪ್ರಗತಿಯನ್ನು ಅಧಿಕಾರಿಗಳೊಂದಿಗೆ ಪರಿಶೀಲಿಸಿ, ಯಾವುದೇ ವಿಳಂಬವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದರು. ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದ್ದು, ಯೋಜನೆ ಸಮಯಕ್ಕೆ ಪೂರ್ಣಗೊಳ್ಳಬೇಕು ಎಂಬುದಕ್ಕೆ ಅವರು ವಿಶೇಷ ಒತ್ತು ನೀಡಿದ್ದರು.

ಸಿಂದಗಿ ಭಾಗದ ಕೃಷಿ ಸಂಪೂರ್ಣವಾಗಿ ಮಳೆಯನ್ನೇ ಅವಲಂಬಿಸಿರುವ ಕಾರಣ, ಈ ಯೋಜನೆ ಪೂರ್ಣಗೊಂಡರೆ ಸಾವಿರಾರು ಎಕರೆ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ದೊರೆಯಲಿದ್ದು, ರೈತರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ ಕೃಷಿ ಉತ್ಪಾದನೆಯೂ ಹೆಚ್ಚಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಲಾಗಿತ್ತು.

ಮಾಜಿ ಶಾಸಕ ರಮೇಶ ಭೂಸನೂರ ಅವರು ತಮ್ಮ ರಾಜಕೀಯ ಜೀವನದಲ್ಲಿ ರೈತರ ಪರವಾಗಿ ಸದಾ ಧ್ವನಿಯಾಗಿದ್ದು, ನೀರಾವರಿ, ಕುಡಿಯುವ ನೀರು, ರಸ್ತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿದ್ದಾರೆ. ಜನರಿಗೆ ನೀಡಿದ ಭರವಸೆಗಳನ್ನು ಕಾರ್ಯರೂಪಕ್ಕೆ ತರುವುದೇ ತಮ್ಮ ಬದ್ಧತೆ ಎಂಬುದನ್ನು ಅನೇಕ ಅಭಿವೃದ್ಧಿ ಕಾಮಗಾರಿಗಳ ಮೂಲಕ ಸಾಬೀತುಪಡಿಸಿದ್ದಾರೆ.

ರೈತರ ಹಿತವೇ ಮೊದಲ ಆದ್ಯತೆ, ಅಭಿವೃದ್ಧಿಯೇ ನಮ್ಮ ಬದ್ಧತೆ ಎಂಬ ಸಂಕಲ್ಪದೊಂದಿಗೆ ಕಾರ್ಯನಿರ್ವಹಿಸಿದ ನಾಯಕತ್ವದ ಫಲವಾಗಿ ಸಿಂದಗಿ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ವೇಗ ದೊರೆತಿದ್ದು, ಜನಸೇವೆಯೇ ಧ್ಯೇಯ ಮತ್ತು ಅಭಿವೃದ್ಧಿಯೇ ಗುರಿ ಎಂಬ ಸಂದೇಶವನ್ನು ಈ ಭೇಟಿ ಮತ್ತೊಮ್ಮೆ ಸಾರಿ ಹೇಳುತ್ತದೆ.

ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ರೈತರ ಜೀವನಮಟ್ಟ ಸುಧಾರಣೆಗೆ ಕೈಗೊಂಡ ಪ್ರಯತ್ನಗಳನ್ನು ಜನತೆ ಇಂದಿಗೂ ಸ್ಮರಿಸುತ್ತಿದ್ದು, ಮಾತಿಗಿಂತ ಕೆಲಸವೇ ಮುಖ್ಯ ಎಂಬುದನ್ನು ಈ ಯೋಜನೆಗೆ ನೀಡಿದ ಆದ್ಯತೆ ಸ್ಪಷ್ಟಪಡಿಸುತ್ತದೆ ಎಂದು ಬೆಂಬಲಿಗರು ಅಭಿಪ್ರಾಯಪಟ್ಟಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande