ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಸೋನಮ್ ವಾಂಗ್ ಚುಕ್ ಹೋರಾಟ ಬೆಂಬಲಿಸಿ ಪ್ರತಿಭಟನೆ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಸೋನಮ್ ವಾಂಗ್ ಚುಕ್ ಹೋರಾಟ ಬೆಂಬಲಿಸಿ ಪ್ರತಿಭಟನೆ
ನೀಟ್ ಪರೀಕ್ಷೆ ಸೋರಿಕೆ ವಿರೋಧಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಸೋನಮ್ ವಾಂಗ್ ಚುಕ್ ರವರನ್ನು ಬೆಂಬಲಿಸಿ ಪ್ರತಿಭಟನೆ ನಡೆಸಲಾಯಿತು.


ಕೋಲಾರ, ೧೮ ಜುಲೈ (ಹಿ.ಸ):

ಆ್ಯಂಕರ್ : ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹೊಣೆಯನ್ನು ಕೇಂದ್ರ ಸರ್ಕಾರ ವಹಿಸಬೇಕು ಹಾಗೂ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗುವಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ, ಸೋನಮ್ ವಾಂಗ್ ಚುಕ್ ಅವರ ಹೋರಾಟವನ್ನು ಬೆಂಬಲಿಸಿ ಕೋಲಾರ ಜಿಲ್ಲೆಯ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಶನಿವಾರ ಗಾಂಧಿವನದಲ್ಲಿ ಧರಣಿ ನಡೆಸಲಾಯಿತು.

ಸಿಪಿಐಎಂ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳುಮಾಡುವ ನೀಟ್ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಬೇಕು ಪಾರದರ್ಶಕ ಪರೀಕ್ಷಾ ವ್ಯವಸ್ಥೆ ಜಾರಿಗೆ ತರಬೇಕು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಸೋನಮ್ ವಾಂಗ್ ಚುಕ್ ಅವರ ಬೇಡಿಕೆಗಳಿಗೆ ಕೂಡಲೇ ಕೇಂದ್ರ ಸರ್ಕಾರ ಸ್ಪಂದಿಸಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ಬಣಿ ಶಿವಪ್ಪ ಮಾತನಾಡಿ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿರುವ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಕೇಂದ್ರ ಸರ್ಕಾರವೇ ನೈತಿಕ ಹೊಣೆ ಹೊರಬೇಕು ಕೇಂದ್ರ ಮಾನವ ಸಂಪನ್ಮೂಲ ಸಚಿವ ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಸೋನಂ ವಾಂಗ್ ಚುಕ್ ಅವರ ಉಪವಾಸ ಸತ್ಯಾಗ್ರಹವನ್ನು ನಿಲ್ಲಿಸಲು ಅವರ ಬೇಡಿಕೆಯನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಎನ್.ಎನ್. ಶ್ರೀರಾಮ್, ದಲಿತ ಸಂಘರ್ಷ ಸಮಿತಿ ಮುಖಂಡರಾದ ಟಿ. ವಿಜಯಕುಮಾರ್, ಹಾರೋಹಳ್ಳಿ ರವಿ, ವಕ್ಕಲೇರಿ ರಾಜಪ್ಪ, ಹೂವರಸನಹಳ್ಳಿ ರಾಜಪ್ಪ, ವರದೇನಹಳ್ಳಿ ವೆಂಕಟೇಶ್, ದೇವರಾಜ್, ಮಲ್ಲಸಂದ್ರ ವೆಂಕಟಸ್ವಾಮಿ, ಭೀಮಸೇನೆ ಮುಖಂಡ ಪಂಡಿತ್ ಮುನಿವೆಂಕಟಪ್ಪ, ಮಾನವ ಬಂಧುತ್ವ ವೇದಿಕೆಯ ಬೀರಮಾನಹಳ್ಳಿ ಆಂಜನಪ್ಪ, ಸಿಐಟಿಯು ಮುಖಂಡರಾದ ವಿಜಯಕೃಷ್ಣ ಹಾಗೂ ಎಂ. ಭೀಮರಾಜ್, ರೈತ ಸಂಘದ ಮುಖಂಡರಾದ ಆನಂದ್ ಕುಮಾರ್ ಕೋಟಿಗಾನಹಳ್ಳಿ ಗಣೇಶ್ ಗೌಡ, ನಾರಾಯಣರೆಡ್ಡಿ, ಯಲ್ಲಪ್ಪ, ಅಲ್ಪಸಂಖ್ಯಾತ ಮುಖಂಡ ಅನ್ವರ್ ಪಾಷಾ ಹಾಗೂ ಎಸ್ಎಫ್ಐ ಮುಖಂಡರಾದ ಸುರೇಶ್, ಶಶಿಕುಮಾರ್ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande