
ಬೆಂಗಳೂರು, 18 ಜುಲೈ (ಹಿ.ಸ.):
ಆ್ಯಂಕರ್:
ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ಗುಡುಗು, ಸಿಡಿಲು ಸಹಿತ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮುನ್ಸೂಚನೆ ನೀಡಿದೆ.
ಮುನ್ಸೂಚನೆಯ ಪ್ರಕಾರ, ರಾಜ್ಯದ ಹಲವೆಡೆ ಗುಡುಗು, ಸಿಡಿಲು ಮತ್ತು ಬಲವಾದ ಗಾಳಿಯೊಂದಿಗೆ ಮಳೆಯಾಗಲಿದ್ದು, ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯೂ ಇದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹಾಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.