
ರಾಜೌರಿ, 18 ಜುಲೈ (ಹಿ.ಸ.):
ಆ್ಯಂಕರ್:
ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯ ನಿಯಂತ್ರಣ ರೇಖೆಯ ತರ್ಕುಂಡಿ ವಲಯದಲ್ಲಿ ಶುಕ್ರವಾರ ಮಧ್ಯರಾತ್ರಿಯಿಂದ ಶನಿವಾರ ಬೆಳಗಿನ ಜಾವದವರೆಗೆ ಪಾಕಿಸ್ತಾನ ಸೇನೆ ಸಣ್ಣ ಶಸ್ತ್ರಾಸ್ತ್ರಗಳಿಂದ ಭಾರೀ ಗುಂಡಿನ ದಾಳಿ ನಡೆಸಿದೆ.
ಭಾರತೀಯ ಸೇನೆಯೂ ಪಾಕಿಸ್ತಾನದ ದಾಳಿಗೆ ತಕ್ಕ ಪ್ರತಿಕ್ರಿಯೆ ನೀಡಿದ್ದು, ಉಭಯ ಪಡೆಗಳ ನಡುವೆ ಕೆಲಕಾಲ ಗುಂಡಿನ ಚಕಮಕಿ ನಡೆದಿದೆ. ಈ ಘಟನೆಯಲ್ಲಿ ಇದುವರೆಗೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಬೆಳವಣಿಗೆಗಳಿಂದ ಅಂತಾರಾಷ್ಟ್ರೀಯ ಗಮನ ಬೇರೆಡೆ ಸೆಳೆಯುವ ಉದ್ದೇಶದಿಂದಲೇ ಈ ಗುಂಡಿನ ದಾಳಿ ನಡೆಸಿರಬಹುದು ಎಂದು ಮೂಲಗಳು ಶಂಕಿಸಿವೆ. ಇದೇ ವೇಳೆ ಒಳನುಸುಳುವಿಕೆಯ ಪ್ರಯತ್ನವೂ ನಡೆದಿರಬಹುದೆಂಬ ಅನುಮಾನ ವ್ಯಕ್ತವಾಗಿದ್ದು, ಭಾರತೀಯ ಸೇನೆ ನಿಯಂತ್ರಣ ರೇಖೆ ಸಮೀಪ ಶೋಧ ಕಾರ್ಯಾಚರಣೆ ಆರಂಭಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.