ರಾಯಲ್ ಪ್ಯಾಲೇಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ನೀಟ್-2026ರಲ್ಲಿ ಅದ್ಭುತ ಸಾಧನೆ; ವೈದ್ಯಕೀಯ ಕ್ಷೇತ್ರದ ಕನಸಿಗೆ ಭದ್ರ ಅಡಿಗಲ್ಲು
ಬಾಗಲಕೋಟೆ, 18 ಜುಲೈ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ರಾಮತೀರ್ಥದಲ್ಲಿರುವ ರಾಯಲ್ ಪ್ಯಾಲೇಸ್ ಪಿಯು ಕಾಲೇಜು ಮತ್ತೊಮ್ಮೆ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನ ಶ್ರೇಷ್ಠತೆಯನ್ನು ಸಾಬೀತುಪಡಿಸಿದ್ದು, ನೀಟ್–2026 ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡುವ ಮೂಲಕ ಕಾ
ನೀಟ್


ಬಾಗಲಕೋಟೆ, 18 ಜುಲೈ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ

ಜಮಖಂಡಿ ತಾಲೂಕಿನ ರಾಮತೀರ್ಥದಲ್ಲಿರುವ ರಾಯಲ್ ಪ್ಯಾಲೇಸ್ ಪಿಯು ಕಾಲೇಜು ಮತ್ತೊಮ್ಮೆ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನ ಶ್ರೇಷ್ಠತೆಯನ್ನು ಸಾಬೀತುಪಡಿಸಿದ್ದು, ನೀಟ್–2026 ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡುವ ಮೂಲಕ ಕಾಲೇಜಿನ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದ್ದಾರೆ.

ರಾಷ್ಟ್ರಮಟ್ಟದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ನಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣದತ್ತ ಆತ್ಮವಿಶ್ವಾಸದಿಂದ ಹೆಜ್ಜೆಯಿಟ್ಟಿದ್ದು, ಈ ಸಾಧನೆಯು ಕಾಲೇಜಿನ ಗುಣಮಟ್ಟದ ಶಿಕ್ಷಣ, ಸಮರ್ಪಿತ ಬೋಧಕ ವರ್ಗ ಹಾಗೂ ವಿದ್ಯಾರ್ಥಿಗಳ ಪರಿಶ್ರಮಕ್ಕೆ ಸಾಕ್ಷಿಯಾಗಿದೆ.

ಈ ಕುರಿತು ಮಾಜಿ ಶಾಸಕ ಆನಂದ ನ್ಯಾಮಗೌಡ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಮೂಲಾಧಾರ. ನಮ್ಮ ರಾಯಲ್ ಪ್ಯಾಲೇಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಜಮಖಂಡಿ ಭಾಗಕ್ಕೆ ಹೆಮ್ಮೆ ತಂದಿದ್ದಾರೆ. ಇವರ ಸಾಧನೆ ಇತರ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗಿದೆ. ಭವಿಷ್ಯದಲ್ಲಿ ಉತ್ತಮ ವೈದ್ಯರಾಗಿ ಸಮಾಜಸೇವೆ ಮಾಡುವಂತಾಗಲಿ ಎಂದು ಶುಭ ಹಾರೈಸಿದರು.

ನೀಟ್–2026ರಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಗಳಿಸಿದ ಅಂಕಗಳು ಹೀಗಿವೆ:

ಚೇತನ್ ಅಥಣಿ – 592 / 720

ರವಿ ಸೋಮನಿಂಗ್ – 536 / 720

ಪ್ರೀತಮ್ ಸರಕಾರ್ – 488 / 720

ರಾಹುಲ್ ಗುಡ್ಲಿ – 470 / 720

ಈ ಸಾಧನೆಯ ಹಿಂದೆ ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಸ್ತು, ಆತ್ಮವಿಶ್ವಾಸ ಹಾಗೂ ಕಾಲೇಜಿನ ಅನುಭವಿ ಉಪನ್ಯಾಸಕರ ಮಾರ್ಗದರ್ಶನ ಪ್ರಮುಖ ಪಾತ್ರ ವಹಿಸಿದೆ ಎಂದು ಕಾಲೇಜು ಆಡಳಿತ ತಿಳಿಸಿದೆ.

ವಿದ್ಯಾರ್ಥಿಗಳ ಈ ಸಾಧನೆಯ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದ್ದು, ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಪೋಷಕರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು.

ವೈದ್ಯಕೀಯ ಶಿಕ್ಷಣದ ಕನಸನ್ನು ನನಸಾಗಿಸಿಕೊಳ್ಳುವ ದಿಸೆಯಲ್ಲಿ ಯಶಸ್ವಿ ಹೆಜ್ಜೆ ಇಟ್ಟಿರುವ ಈ ವಿದ್ಯಾರ್ಥಿಗಳಿಗೆ ರಾಯಲ್ ಪ್ಯಾಲೇಸ್ ಪಿಯು ಕಾಲೇಜು, ರಾಮತೀರ್ಥ, ಜಮಖಂಡಿ ವತಿಯಿಂದ ಶುಭಾಶಯಗಳನ್ನು ತಿಳಿಸಲಾಗಿದ್ದು, ಮುಂದಿನ ವೈದ್ಯಕೀಯ ಶಿಕ್ಷಣ ಹಾಗೂ ವೃತ್ತಿಜೀವನದಲ್ಲಿಯೂ ಇದೇ ರೀತಿಯ ಸಾಧನೆ ಮುಂದುವರಿಯಲಿ ಎಂದು ಹಾರೈಸಲಾಗಿದೆ.

ಕಳೆದ ಹಲವು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿ ನೀಡುತ್ತಿರುವ ರಾಯಲ್ ಪ್ಯಾಲೇಸ್ ಪಿಯು ಕಾಲೇಜು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಒದಗಿಸುವ ಮೂಲಕ ಅನೇಕ ಯಶಸ್ವಿ ವೈದ್ಯರು, ಇಂಜಿನಿಯರ್ಗಳು ಹಾಗೂ ವೃತ್ತಿಪರರನ್ನು ಸಮಾಜಕ್ಕೆ ನೀಡುತ್ತಿರುವುದು ಗಮನಾರ್ಹವಾಗಿದೆ. ನೀಟ್–2026ರ ಈ ಫಲಿತಾಂಶವೂ ಕಾಲೇಜಿನ ಶೈಕ್ಷಣಿಕ ಬದ್ಧತೆ ಮತ್ತು ಸಾಧನೆಗೆ ಮತ್ತೊಂದು ಹೆಮ್ಮೆಯ ಗರಿ ಸೇರ್ಪಡೆಯಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande