ಚೆನ್ನಮ್ಮನವರ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ
ಬೆಂಗಳೂರು, 18 ಜುಲೈ (ಹಿ.ಸ.): ಆ್ಯಂಕರ್: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮನವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎಕ್ಸ್‌ನಲ್ಲಿ ಸಂತಾಪ ಸಂದೇಶ ಪ್ರಕಟಿಸಿರುವ ಅವರು, ಜನತಾ ಪರಿವಾರದಲ್ಲಿದ್ದ ದಿನಗಳಿಂದಲೇ ದೇವೇಗೌಡರ ಕುಟುಂಬದೊಂ
ಚನ್ನಮ್ಮ ಸಂಗ್ರಹ ಚಿತ್ರ


ಬೆಂಗಳೂರು, 18 ಜುಲೈ (ಹಿ.ಸ.):

ಆ್ಯಂಕರ್:

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮನವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಎಕ್ಸ್‌ನಲ್ಲಿ ಸಂತಾಪ ಸಂದೇಶ ಪ್ರಕಟಿಸಿರುವ ಅವರು, ಜನತಾ ಪರಿವಾರದಲ್ಲಿದ್ದ ದಿನಗಳಿಂದಲೇ ದೇವೇಗೌಡರ ಕುಟುಂಬದೊಂದಿಗೆ ನಿಕಟ ಒಡನಾಟ ಹೊಂದಿದ್ದ ಕಾರಣ ಚೆನ್ನಮ್ಮನವರನ್ನು ಸಮೀಪದಿಂದ ಬಲ್ಲವನಾಗಿದ್ದೇನೆ ಎಂದು ತಿಳಿಸಿದ್ದಾರೆ.

ಚೆನ್ನಮ್ಮನವರು ಜೀವನದಲ್ಲಿ ಎದುರಾದ ಕಷ್ಟ-ನೋವುಗಳನ್ನು ಧೈರ್ಯದಿಂದ ಎದುರಿಸಿ, ದೇವೇಗೌಡರ ರಾಜಕೀಯ ಜೀವನದ ಏಳುಬೀಳುಗಳ ನಡುವೆಯೂ ದೊಡ್ಡ ಕುಟುಂಬವನ್ನು ಸಮರ್ಥವಾಗಿ ನಿಭಾಯಿಸಿದ ಆದರ್ಶ ಗೃಹಿಣಿಯಾಗಿದ್ದರು. ಮಾಜಿ ಪ್ರಧಾನಿಯ ಪತ್ನಿಯಾಗಿದ್ದರೂ ಯಾವುದೇ ಹಮ್ಮು-ಬಿಮ್ಮಿಲ್ಲದೆ ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆತು ಮಾದರಿ ಸತಿಯಾಗಿ ಬದುಕಿದವರು ಎಂದು ಸ್ಮರಿಸಿದ್ದಾರೆ.

ದೀರ್ಘಕಾಲದ ಸಂಗಾತಿಯನ್ನು ಕಳೆದುಕೊಂಡಿರುವ ದೇವೇಗೌಡರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಗೌಡರ ಕುಟುಂಬ ಸದಸ್ಯರಿಗೆ ನನ್ನ ಸಂತಾಪಗಳು. ಅವರ ನೋವಿನಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಸಿದ್ದರಾಮಯ್ಯ ಪ್ರಾರ್ಥಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande