ಉಪವಾಸ ಸತ್ಯಾಗ್ರಹ ನಿರತ ಸೋನಂ ವಾಂಗ್ಚುಕ್ ಆಸ್ಪತ್ರೆಗೆ ದಾಖಲು
ನವದೆಹಲಿ, 18 ಜುಲೈ (ಹಿ.ಸ.): ಆ್ಯಂಕರ್:ಕಳೆದ 20 ದಿನಗಳಿಂದ ಜಂತರ್-ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಹೋರಾಟಗಾರ ಸೋನಂ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸರು ಶನಿವಾರ ಬೆಳಿಗ್ಗೆ ಚಿಕಿತ್ಸೆಗಾಗಿ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರ ಆರೋಗ್ಯ ಹದಗೆಡುತ್ತಿರುವ ಹಿನ್
ಸೋನಂ ವಾಂಗ್ಚುಕ್ ಆಸ್ಪತ್ರೆಗೆ ದಾಖಲು


ನವದೆಹಲಿ, 18 ಜುಲೈ (ಹಿ.ಸ.):

ಆ್ಯಂಕರ್:ಕಳೆದ 20 ದಿನಗಳಿಂದ ಜಂತರ್-ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಹೋರಾಟಗಾರ ಸೋನಂ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸರು ಶನಿವಾರ ಬೆಳಿಗ್ಗೆ ಚಿಕಿತ್ಸೆಗಾಗಿ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರ ಆರೋಗ್ಯ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಹಾಗೂ ನ್ಯಾಯಾಲಯದ ಆದೇಶದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಫ್ದರ್‌ಜಂಗ್ ಆಸ್ಪತ್ರೆ ಆಡಳಿತದ ಪ್ರಕಾರ, ಸೋನಂ ವಾಂಗ್‌ಚುಕ್ ಅವರ ವೈದ್ಯಕೀಯ ಪರೀಕ್ಷೆಗಳು ನಡೆಯುತ್ತಿದ್ದು, ಆರೋಗ್ಯದ ಕುರಿತು ಶೀಘ್ರದಲ್ಲೇ ಹೆಚ್ಚಿನ ಮಾಹಿತಿ ನೀಡಲಾಗುವುದು.

ಪೊಲೀಸರ ಹೇಳಿಕೆಯಂತೆ, ವಾಂಗ್‌ಚುಕ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ್ದು, ಎಲ್ಲ ಕಾರ್ಯಕರ್ತರೂ ಶಾಂತಿಯುತವಾಗಿ ಜಂತರ್-ಮಂತರ್ ಪ್ರದೇಶವನ್ನು ತೆರವುಗೊಳಿಸುವಂತೆ ಮನವಿ ಮಾಡಲಾಗಿದೆ.

ಇನ್ನೊಂದೆಡೆ, ಸಿಜೆಪಿ ಕಾರ್ಯಕರ್ತರು ಸಾದಾ ಉಡುಪಿನಲ್ಲಿ ಬಂದಿದ್ದ ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ವೇಳೆ ಚಳವಳಿಯ ಪ್ರಮುಖ ನಾಯಕ ಅಭಿಜೀತ್ ದೀಪಿಕೆ ಸ್ಥಳದಲ್ಲಿರಲಿಲ್ಲ ಎಂದು ತಿಳಿದುಬಂದಿದೆ. ಪಕ್ಷದ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಮಾಹಿತಿಯಂತೆ, ಅವರು ಸ್ನಾನಕ್ಕೆ ತೆರಳಿದ್ದ ವೇಳೆ ಪೊಲೀಸರು ತಮ್ಮನ್ನು ಬಲವಂತವಾಗಿ ವಶಕ್ಕೆ ಪಡೆದು ಹಲ್ಲೆ ನಡೆಸಿದ್ದಾರೆ ಎಂದು ದೀಪಿಕೆ ವಿಡಿಯೊ ಸಂದೇಶದಲ್ಲಿ ಆರೋಪಿಸಿದ್ದು, ಚಳವಳಿಯನ್ನು ಮುಂದುವರಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande