ಸೋನಂ ವಾಂಗ್ಚುಕ್ ಆರೋಗ್ಯ ಸ್ಥಿರ: ಸಫ್ದರ್ಜಂಗ್ ಆಸ್ಪತ್ರೆ ವೈದ್ಯರ ಮಾಹಿತಿ
ನವದೆಹಲಿ, 18 ಜುಲೈ (ಹಿ.ಸ.): ಆ್ಯಂಕರ್: ಕಳೆದ 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಹೋರಾಟಗಾರ ಸೋನಂ ವಾಂಗ್‌ಚುಕ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಶನಿವಾರ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ಚಾರು ಬಂಬಾ
ವಾಂಗ್ಚುಕ್ ಸಂಗ್ರಹ ಚಿತ್ರ


ನವದೆಹಲಿ, 18 ಜುಲೈ (ಹಿ.ಸ.):

ಆ್ಯಂಕರ್:

ಕಳೆದ 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಹೋರಾಟಗಾರ ಸೋನಂ ವಾಂಗ್‌ಚುಕ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಶನಿವಾರ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ಚಾರು ಬಂಬಾ ಅವರು ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ, ವಾಂಗ್‌ಚುಕ್ ಬೆಳಿಗ್ಗೆ ಸುಮಾರು 7.40ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದು, ದೀರ್ಘಕಾಲದ ಉಪವಾಸದಿಂದಾಗಿ ದೇಹದಲ್ಲಿ ನೀರಿನ ಕೊರತೆ ಹಾಗೂ ದೌರ್ಬಲ್ಯ ಕಾಣಿಸಿಕೊಂಡಿದೆ. ಆದರೆ ಅವರ ಪ್ರಮುಖ ಆರೋಗ್ಯ ಸೂಚಕಗಳು ಸ್ಥಿರವಾಗಿದ್ದು, ಅವರು ಸಂಪೂರ್ಣ ಪ್ರಜ್ಞೆಯಲ್ಲಿದ್ದಾರೆ ಎಂದು ತಿಳಿಸಲಾಗಿದೆ.

ತುರ್ತು ಚಿಕಿತ್ಸಾ ವಿಭಾಗದಲ್ಲಿ ಪ್ರಾಥಮಿಕ ಪರೀಕ್ಷೆಯ ಬಳಿಕ ಅವರನ್ನು ವೈದ್ಯಕೀಯ ವಿಭಾಗಕ್ಕೆ ದಾಖಲಿಸಲಾಗಿದ್ದು, ದೇಹದಲ್ಲಿನ ಸೋಡಿಯಂ, ಪೊಟ್ಯಾಸಿಯಂ ಸೇರಿದಂತೆ ಎಲೆಕ್ಟ್ರೋಲೈಟ್ ಸಮತೋಲನವನ್ನು ಸರಿಪಡಿಸುವ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದ ಮೇಲೆ ವೈದ್ಯರು ನಿರಂತರ ನಿಗಾ ವಹಿಸಿದ್ದು, ಚಿಕಿತ್ಸೆಯ ನಂತರ ಮತ್ತೊಮ್ಮೆ ಆರೋಗ್ಯ ಸ್ಥಿತಿಯನ್ನು ಮೌಲ್ಯಮಾಪನ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande