ಚೆನ್ನಮ್ಮ ದೇವೇಗೌಡ ನಿಧನಕ್ಕೆ ಟಿಟಿಡಿ ಸದಸ್ಯ ಎಸ್. ನರೇಶ್ ಕುಮಾರ್ ಸಂತಾಪ
ಬೆಂಗಳೂರು, 18 ಜುಲೈ (ಹಿ.ಸ.): ಆ್ಯಂಕರ್:ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರ ನಿಧನಕ್ಕೆ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಆಡಳಿತ ಮಂಡಳಿ ಸದಸ್ಯ ಎಸ್. ನರೇಶ್ ಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಚೆನ್ನಮ್ಮ ಅವರು ಸರಳ, ಸೌಮ್ಯ ಹಾಗೂ ಕುಟುಂಬ
ಚೆನ್ನಮ್ಮ ದೇವೇಗೌಡ ನಿಧನಕ್ಕೆ ಟಿಟಿಡಿ ಸದಸ್ಯ ಎಸ್. ನರೇಶ್ ಕುಮಾರ್ ಸಂತಾಪ


ಬೆಂಗಳೂರು, 18 ಜುಲೈ (ಹಿ.ಸ.):

ಆ್ಯಂಕರ್:ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರ ನಿಧನಕ್ಕೆ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಆಡಳಿತ ಮಂಡಳಿ ಸದಸ್ಯ ಎಸ್. ನರೇಶ್ ಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಚೆನ್ನಮ್ಮ ಅವರು ಸರಳ, ಸೌಮ್ಯ ಹಾಗೂ ಕುಟುಂಬ ಮೌಲ್ಯಗಳಿಗೆ ಬದ್ಧರಾಗಿದ್ದ ವ್ಯಕ್ತಿತ್ವವಾಗಿದ್ದು, ದೇವೇಗೌಡರ ಸಾರ್ವಜನಿಕ ಜೀವನದ ಹಿಂದೆ ಶಕ್ತಿಯಾಗಿ ನಿಂತು ಕುಟುಂಬವನ್ನು ಸಮರ್ಥವಾಗಿ ಮುನ್ನಡೆಸಿದ ಅವರ ಸೇವೆ ಮತ್ತು ತ್ಯಾಗ ಸದಾ ಸ್ಮರಣೀಯ ಎಂದು ಅವರು ಹೇಳಿದ್ದಾರೆ.

ದಿವಂಗತ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವೇಗೌಡ ಕುಟುಂಬಕ್ಕೆ ಶ್ರೀ ವೆಂಕಟೇಶ್ವರ ಸ್ವಾಮಿ ಕರುಣಿಸಲಿ ಎಂದು ಎಸ್. ನರೇಶ್ ಕುಮಾರ್ ಪ್ರಾರ್ಥಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande