ತುಮಕೂರು:ಹರದಗೆರೆ ಗೊಲ್ಲರಹಟ್ಟಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ
ತುಮಕೂರು, 18 ಜುಲೈ (ಹಿ.ಸ.): ಆ್ಯಂಕರ್: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅಳಿಲುಗಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರದಗೆರೆ ಗೊಲ್ಲರಹಟ್ಟಿ ಗ್ರಾಮಕ್ಕೆ ಜಿಲ್ಲಾಧಿಕಾರಿ ದಿಡೀರ್ ಭೇಟಿ ನೀಡಿ, ಕುಡಿಯುವ ನೀರಿನ ಸಮಸ್ಯೆಯನ್ನು ಪರಿಶೀಲಿಸಿ ಅಧಿಕಾರಿಗಳಿಗೆ ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
DC visit


ತುಮಕೂರು, 18 ಜುಲೈ (ಹಿ.ಸ.):

ಆ್ಯಂಕರ್:

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅಳಿಲುಗಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರದಗೆರೆ ಗೊಲ್ಲರಹಟ್ಟಿ ಗ್ರಾಮಕ್ಕೆ ಜಿಲ್ಲಾಧಿಕಾರಿ ದಿಡೀರ್ ಭೇಟಿ ನೀಡಿ, ಕುಡಿಯುವ ನೀರಿನ ಸಮಸ್ಯೆಯನ್ನು ಪರಿಶೀಲಿಸಿ ಅಧಿಕಾರಿಗಳಿಗೆ ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ವಿಪತ್ತು ನಿರ್ವಹಣಾ ಯೋಜನೆಯಡಿ ಕೊರೆದಿರುವ ಬೋರ್‌ವೆಲ್‌ಗೆ ತಕ್ಷಣ ಮೋಟಾರ್ ಅಳವಡಿಸಿ ನೀರಿನ ಲಭ್ಯತೆಯನ್ನು ಪರಿಶೀಲಿಸುವಂತೆ ನಿರ್ದೇಶಿಸಿದ ಅವರು, ಅಗತ್ಯವಿದ್ದರೆ ಗ್ರಾಮ ಪಂಚಾಯಿತಿಯ ಸ್ವಂತ ಸಂಪನ್ಮೂಲ ಬಳಸಿಕೊಂಡು ಪೈಪ್‌ಲೈನ್ ಕಾಮಗಾರಿ ಪೂರ್ಣಗೊಳಿಸಿ, ನಾಳೆ ಸಂಜೆಯೊಳಗೆ ಹೊಸ ಬೋರ್‌ವೆಲ್‌ನಿಂದ ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವಂತೆ ಆದೇಶಿಸಿದರು.

ಪರಿಶೀಲನಾ ವೇಳೆ ಗುಬ್ಬಿ ತಹಸೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande