ಮೈಸೂರು: 'ಆಪರೇಷನ್ ರೈಸ್' ಹಾಗೂ 'ಬೇಡ ಬ್ರೋ' ಜಾಗೃತಿ ಅಭಿಯಾನಕ್ಕೆ ಚಾಲನೆ
ಮೈಸೂರು, 18 ಜುಲೈ (ಹಿ.ಸ.): ಆ್ಯಂಕರ್: ಮಾದಕವಸ್ತು ವ್ಯಸನ ತಡೆಗಟ್ಟುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಪೊಲೀಸ್ ಇಲಾಖೆಯ ಮಹತ್ವಾಕಾಂಕ್ಷಿ ''ಆಪರೇಷನ್ ರೈಸ್'' ಉಪಕ್ರಮ ಮತ್ತು ''ಬೇಡ ಬ್ರೋ'' ಡ್ರಗ್ಸ್ ವ್ಯಸನ ಮುಕ್ತ ಜಾಗೃತಿ ಅಭಿಯಾನದ ಪೋಸ್ಟರ್ ಅನ್ನು ಶನಿವಾರ ಮೈಸೂರು ನಗರ ಪೊಲೀ
Campaign


ಮೈಸೂರು, 18 ಜುಲೈ (ಹಿ.ಸ.):

ಆ್ಯಂಕರ್:

ಮಾದಕವಸ್ತು ವ್ಯಸನ ತಡೆಗಟ್ಟುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಪೊಲೀಸ್ ಇಲಾಖೆಯ ಮಹತ್ವಾಕಾಂಕ್ಷಿ 'ಆಪರೇಷನ್ ರೈಸ್' ಉಪಕ್ರಮ ಮತ್ತು 'ಬೇಡ ಬ್ರೋ' ಡ್ರಗ್ಸ್ ವ್ಯಸನ ಮುಕ್ತ ಜಾಗೃತಿ ಅಭಿಯಾನದ ಪೋಸ್ಟರ್ ಅನ್ನು ಶನಿವಾರ ಮೈಸೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಬಿಡುಗಡೆ ಮಾಡಲಾಯಿತು.

ಯುವಜನರನ್ನು ಮಾದಕವಸ್ತುಗಳ ದುಷ್ಪರಿಣಾಮಗಳಿಂದ ರಕ್ಷಿಸಿ, ಮಾದಕವಸ್ತು ಮುಕ್ತ ಕರ್ನಾಟಕ ನಿರ್ಮಾಣ ಮಾಡುವ ಉದ್ದೇಶದಿಂದ ಈ ಅಭಿಯಾನವನ್ನು ಜಾರಿಗೊಳಿಸಲಾಗಿದೆ. ಸಮಾಜದಲ್ಲಿ ಜಾಗೃತಿ ಮೂಡಿಸಿ, ಯುವಕರು ವ್ಯಸನದಿಂದ ದೂರ ಉಳಿಯುವಂತೆ ಪ್ರೇರೇಪಿಸುವುದು ಈ ಉಪಕ್ರಮದ ಪ್ರಮುಖ ಗುರಿಯಾಗಿದೆ.

ಈ ಸಂದರ್ಭದಲ್ಲಿ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande