ವಿದ್ಯಾರ್ಥಿಗಳ ವಿಶ್ವಾಸ ಮರುಸ್ಥಾಪನೆಗೆ ಕಾಂಗ್ರೆಸ್ ಬದ್ಧ: ಬಿ.ಕೆ. ಹರಿಪ್ರಸಾದ್
ಬೆಂಗಳೂರು, 18 ಜುಲೈ (ಹಿ.ಸ.): ಆ್ಯಂಕರ್: ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಘಟನೆಗಳಿಂದ ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ವಿದ್ಯಾರ್ಥಿಗಳ ನಂಬಿಕೆ ಕುಸಿದಿದ್ದು, ಪಾರದರ್ಶಕ ಹಾಗೂ ನ್ಯಾಯಸಮ್ಮತ ಪರೀಕ್ಷಾ ವ್ಯವಸ್ಥೆ ಖಾತ್ರಿಪಡಿಸುವುದು ಅಗತ್ಯ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ
Bkh


ಬೆಂಗಳೂರು, 18 ಜುಲೈ (ಹಿ.ಸ.):

ಆ್ಯಂಕರ್:

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಘಟನೆಗಳಿಂದ ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ವಿದ್ಯಾರ್ಥಿಗಳ ನಂಬಿಕೆ ಕುಸಿದಿದ್ದು, ಪಾರದರ್ಶಕ ಹಾಗೂ ನ್ಯಾಯಸಮ್ಮತ ಪರೀಕ್ಷಾ ವ್ಯವಸ್ಥೆ ಖಾತ್ರಿಪಡಿಸುವುದು ಅಗತ್ಯ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

ನಗರದ ಭಾರತ್ ಜೋಡೋ ಭವನದಲ್ಲಿ ಯುವ ಕಾಂಗ್ರೆಸ್ ಆಯೋಜಿಸಿದ್ದ ವಿದ್ಯಾರ್ಥಿ–ಯುವ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಆತಂಕ, ಅನಿಶ್ಚಿತತೆ ಹಾಗೂ ಶಿಕ್ಷಣ ವ್ಯವಸ್ಥೆಯ ಕುರಿತು ಇರುವ ಕಳವಳಗಳನ್ನು ಮುಕ್ತವಾಗಿ ಹಂಚಿಕೊಳ್ಳುವಂತೆ ಕರೆ ನೀಡಿದರು.

ವಿದ್ಯಾರ್ಥಿಗಳ ಕನಸುಗಳನ್ನು ರಕ್ಷಿಸುವುದು ಸಮಾಜದ ಜವಾಬ್ದಾರಿಯಾಗಿದ್ದು, ದೇಶದ ಯುವಜನತೆಯ ಭವಿಷ್ಯಕ್ಕೆ ಧಕ್ಕೆ ತರುವ ಯಾವುದೇ ಅಕ್ರಮದ ವಿರುದ್ಧ ಕಾಂಗ್ರೆಸ್ ಪಕ್ಷ ದೃಢವಾಗಿ ಹೋರಾಟ ನಡೆಸಲಿದೆ ಎಂದು ಹೇಳಿದರು.

ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಛಾತ್ರೋಂ ಕಿ ಗೂಂಜ್ ಅಭಿಯಾನ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗೆ ಆಶಾಭರವಸೆ ಮೂಡಿಸುತ್ತಿದ್ದು, ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಆತ್ಮವಿಶ್ವಾಸ ಕಳೆದುಕೊಳ್ಳಬಾರದು ಎಂದು ಅವರು ಕರೆ ನೀಡಿದರು.

ಸಂವಾದದಲ್ಲಿ ರಾಜ್ಯಸಭಾ ಸದಸ್ಯ ಮನ್ಸೂರ್ ಅಲಿಖಾನ್ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande