
ಹಾಸನ, 19 ಜುಲೈ (ಹಿ.ಸ.):
ಆ್ಯಂಕರ್:
ಆತ್ಮ ಯೋಜನೆಯಡಿ 2026-27ನೇ ಸಾಲಿನ ಹಾಸನ ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಹಾಸನ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ಆಧುನಿಕ ಯಂತ್ರೋಪಕರಣ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹಸಿರು ಮನೆ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಸಾಕಾಣಿಕೆ ಇತ್ಯಾದಿ ಕೃಷಿ ಚಟುವಟಿಕೆಗಳಲ್ಲಿ ಸಾಧನೆ ಮಾಡಿದವರು ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಿರುತ್ತಾರೆ.
ರೈತರು ಮತ್ತು ರೈತ ಮಹಿಳೆಯರು ಅರ್ಜಿಗಳನ್ನು ಸಹಾಯಕ ಕೃಷಿ ನಿರ್ದೇಶಕರು, ಹಾಸನ ತಾಲ್ಲೂಕು ಕಚೇರಿಯಿಂದ ಪಡೆದುಕೊಂಡು ಜು.31 ರೊಳಗೆ ಸಲ್ಲಿಸುವುದು, ಪ್ರಶಸ್ತಿ ಪಡೆದ ರೈತರು ಪುನಃ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ, ಹೆಚ್ಚಿನ ಮಾಹಿತಿಗಾಗಿ ಹಾಸನ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಅಧಿಕಾರಿಯವರನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.