ಕೆಟ್ಟ ಹವಾಮಾನ: ಅಮರನಾಥ, ವೈಷ್ಣೋದೇವಿ ಯಾತ್ರೆಗೆ ತಾತ್ಕಾಲಿಕ ತಡೆ
ಜಮ್ಮು, 19 ಜುಲೈ (ಹಿ.ಸ.): ಆ್ಯಂಕರ್: ಭಾರತೀಯ ಹವಾಮಾನ ಇಲಾಖೆ ಕೆಟ್ಟ ಹವಾಮಾನದ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶ್ರೀ ಅಮರನಾಥ ಹಾಗೂ ಶ್ರೀ ಮಾತಾ ವೈಷ್ಣೋದೇವಿ ಯಾತ್ರೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಶನಿವಾರ ಅಮರನಾಥ ಯಾತ್ರೆ ಮುಂದುವರಿದಿದ್ದು, 16,
ಕೆಟ್ಟ ಹವಾಮಾನ: ಅಮರನಾಥ, ವೈಷ್ಣೋದೇವಿ ಯಾತ್ರೆಗೆ ತಾತ್ಕಾಲಿಕ ತಡೆ


ಜಮ್ಮು, 19 ಜುಲೈ (ಹಿ.ಸ.):

ಆ್ಯಂಕರ್:

ಭಾರತೀಯ ಹವಾಮಾನ ಇಲಾಖೆ ಕೆಟ್ಟ ಹವಾಮಾನದ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶ್ರೀ ಅಮರನಾಥ ಹಾಗೂ ಶ್ರೀ ಮಾತಾ ವೈಷ್ಣೋದೇವಿ ಯಾತ್ರೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಶನಿವಾರ ಅಮರನಾಥ ಯಾತ್ರೆ ಮುಂದುವರಿದಿದ್ದು, 16,039 ಭಕ್ತರು ಪವಿತ್ರ ಗುಹೆಯಲ್ಲಿ ದರ್ಶನ ಪಡೆದಿದ್ದಾರೆ. ಜುಲೈ 3ರಿಂದ ಆರಂಭವಾದ ಯಾತ್ರೆಯಲ್ಲಿ ಇದುವರೆಗೆ ಒಟ್ಟು 3,76,779 ಭಕ್ತರು ದರ್ಶನ ಪಡೆದಿದ್ದಾರೆ.

ಶನಿವಾರ ಜಮ್ಮುವಿನ ಭಗವತಿ ನಗರ ಯಾತ್ರಿ ನಿವಾಸದಿಂದ 3,632 ಯಾತ್ರಿಕರ 17ನೇ ತಂಡ ಕಠಿಣ ಭದ್ರತೆಯಲ್ಲಿ ಕಾಶ್ಮೀರಕ್ಕೆ ತೆರಳಿತ್ತು. ಆದರೆ ಹವಾಮಾನ ಇಲಾಖೆ ನೀಡಿದ ಎಚ್ಚರಿಕೆಯ ಹಿನ್ನೆಲೆಯಲ್ಲಿ ಜುಲೈ 19ರಿಂದ ಪಹಲ್ಗಾಮ್ ಹಾಗೂ ಬಾಲ್ತಾಲ್ ಎರಡೂ ಮಾರ್ಗಗಳಿಂದ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಕಾಶ್ಮೀರ ವಿಭಾಗೀಯ ಆಯುಕ್ತ ಅನ್ಷುಲ್ ಗರ್ಗ್ ಅವರು, ಬಾಲ್ತಾಲ್ ಮತ್ತು ನುನ್ವಾನ್/ಚಂದನ್ವಾಡಿ ಮೂಲ ಶಿಬಿರಗಳಿಂದ ಯಾತ್ರಿಕರಿಗೆ ಮುಂದಕ್ಕೆ ತೆರಳಲು ಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ. ಹವಾಮಾನ ಪರಿಸ್ಥಿತಿಯನ್ನು ಸಂಪೂರ್ಣವಾಗಿ ಪರಿಶೀಲಿಸಿ, ಮಾರ್ಗಗಳು ಸುರಕ್ಷಿತವೆಂದು ಖಚಿತವಾದ ಬಳಿಕವೇ ಯಾತ್ರೆಯನ್ನು ಪುನರಾರಂಭಿಸಲಾಗುವುದು ಎಂದು ಆಡಳಿತ ಸ್ಪಷ್ಟಪಡಿಸಿದೆ.

ಇದೇ ವೇಳೆ, ಕೆಟ್ಟ ಹವಾಮಾನದ ಮುನ್ಸೂಚನೆಯ ಹಿನ್ನೆಲೆಯಲ್ಲಿ ಭಕ್ತರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಶ್ರೀ ಮಾತಾ ವೈಷ್ಣೋದೇವಿ ಯಾತ್ರೆಯನ್ನೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮುಂದಿನ ಆದೇಶದವರೆಗೆ ಯಾತ್ರೆ ಕೈಗೊಳ್ಳದಂತೆ ಭಕ್ತರಿಗೆ ಆಡಳಿತ ಮನವಿ ಮಾಡಿದ್ದು, ಅಧಿಕೃತ ಮಾಹಿತಿಯನ್ನು ಮಾತ್ರ ಅನುಸರಿಸುವಂತೆ ಸೂಚಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande