
ಹಾಸನ, 19 ಜುಲೈ (ಹಿ.ಸ.):
ಆ್ಯಂಕರ್:
ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ 2026-27 ನೇ ಸಾಲಿನಲ್ಲಿ ಕೃಷಿಯಲ್ಲಿ ರೈತರು ಸೀಮಿತ ಅವಧಿಯಲ್ಲಿಯೇ ಬೆಳೆಯನ್ನು ಕಟಾವು ಮಾಡಲು ಅಗತ್ಯವಿರುವ ಕಂಬೈನ್ಡ್ ಹಾರ್ವೆಸ್ಟರ್ ಹಬ್ ಮತ್ತು ಶುಗರ್ ಕೇನ್ (ಕಬ್ಬು) ಹಾರ್ವೆಸ್ಟರ್ ಹಬ್ ಸ್ಥಾಪನೆಗಾಗಿ ವೈಯಕ್ತಿಕ ಫಲಾನುಭವಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಸಾಮಾನ್ಯ ವರ್ಗ (ವೈಯಕ್ತಿಕ) ಘಟಕದಡಿ ಫಲಾನುಭವಿಗಳಿಗೆ ಶೇ.40 ರಷ್ಟು ಸಹಾಯಧನ ಇರುತ್ತದೆ, ಸಂಘ-ಸಂಸ್ಥೆ ಪರಿಶಿಷ್ಟ ಜಾತಿ (ವೈಯಕ್ತಿಕ) ಮತ್ತು ಪರಿಶಿಷ್ಟ ಪಂಗಡದ (ವೈಯಕ್ತಿಕ) ರೈತರಿಗೆ ಶೇ.50 ರಷ್ಟು ಸಹಾಯಧನ ಇರುತ್ತದೆ, ಅರ್ಜಿಗಳನ್ನು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.