
ಬೆಳಗಾವಿ, 19 ಜುಲೈ (ಹಿ.ಸ.):
ಆ್ಯಂಕರ್:
ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಹಾಗೂ ಬೆಳಗಾವಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಜುಲೈ 20ರಂದು ಬೆಳಿಗ್ಗೆ 10 ಗಂಟೆಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು, ಜನಪ್ರತಿನಿಧಿಗಳು, ಕಾರ್ಯಕರ್ತರು, ರೈತ ಬಂಧುಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬಿಜೆಪಿ ಮನವಿ ಮಾಡಿದೆ. ರಾಜ್ಯ ಸರ್ಕಾರ ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಬೆಳಗಾವಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸಬೇಕೆಂದು ಪ್ರತಿಭಟನೆಯ ಮೂಲಕ ಒತ್ತಾಯಿಸಲಾಗುವುದು ಎಂದು ಬೆಳಗಾವಿ ಜಿಲ್ಲಾ ಬಿಜೆಪಿ ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.